ಸಿಬಿಐಯಿಂದ ತನಿಖೆಗೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ
Update: 2016-09-15 23:54 IST
ಬೆಂಗಳೂರು, ಸೆ.15: ಡಿವೈಎಸ್ಪಿಎಂ.ಕೆ.ಗಣಪತಿ ಆತ್ಮಹತ್ಯೆ ಕುರಿತು ತನಿಖೆ ನಡೆಸುತ್ತಿರುವ ಅಧಿಕಾರಿಗಳು ಪ್ರಕರಣ ಸಂಬಂಧ ಬಿ ರಿಪೋರ್ಟ್ ಸಲ್ಲಿಸುವುದಕ್ಕೆ ಮುಂದಾಗಿದ್ದು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ.
ಗಣಪತಿ ತಂದೆ ಎಂ.ಕೆ.ಕುಶಾಲಪ್ಪ ಹಾಗೂ ಸಹೋದರ ಎಂ.ಕೆ.ಮಾಚಯ್ಯ ಎಂಬುವರು ಅರ್ಜಿ ಸಲ್ಲಿಸಿದ್ದು, ಅರ್ಜಿಯಲ್ಲಿ ಮಾಜಿ ಸಚಿವ ಕೆ.ಜೆ.ಜಾರ್ಜ್, ಐಪಿಎಸ್ ಅಧಿಕಾರಿಗಳಾದ ಪ್ರಣವ್ ಮೋಹಾಂತಿ, ಎ.ಎಂ.ಗಣಪತಿ ಮತ್ತು ಸಿಐಡಿ ಸಂಸ್ಥೆಯನ್ನು ಪ್ರತಿವಾದಿಗಳನ್ನಾಗಿಸಿದ್ದಾರೆ.