ಪ್ರವೀಣ್ ಪೂಜಾರಿ ಹಂತಕರ ನ್ಯಾಯಾಂಗ ಬಂಧನ ವಿಸ್ತರಣೆ
ಉಡುಪಿ, ಸೆ.15: ಟೆಂಪೊ ರಿಕ್ಷಾದಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದ ಎಂಬ ಕಾರಣಕ್ಕೆ ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಕೆಂಜೂರಿನ ಪ್ರವೀಣ್ ಪೂಜಾರಿ ಪ್ರಕರಣದ ಎಲ್ಲ 21 ಆರೋಪಿಗಳ ನ್ಯಾಯಾಂಗ ಬಂಧನವನ್ನು ಉಡುಪಿ ನ್ಯಾಯಾಲಯವು ಮತ್ತೆ 14 ದಿನಗಳ ಕಾಲ ವಿಸ್ತರಿಸಿದೆ.
ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ 19 ಮತ್ತು ಪ್ರಚೋದನೆ ನೀಡಿದ ಇಬ್ಬರು ಆರೋಪಿಗಳನ್ನು ಹೆಬ್ರಿ ಪೊಲೀಸರು ಗುರುವಾರ ಉಡುಪಿಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯ ಮತ್ತು ಹೆಚ್ಚುವರಿ ಮುಖ್ಯ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದ ಮುಂದೆ ಹಾಜರು ಪಡಿಸಿದರು. ಈ ವೇಳೆ ನ್ಯಾಯಾಧೀಶ ರಾಜೇಶ್ ಕರ್ಣಂ ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಸೆ.28ರವರೆಗೆ ವಿಸ್ತರಿಸಿ ಆದೇಶ ನೀಡಿದರು. ಆ.17ರಂದು ಕೆಂಜೂರಿನ ಪ್ರವೀಣ್ ಪೂಜಾರಿಯನ್ನು ಗೋರಕ್ಷಕರು ಹಲ್ಲೆ ನಡೆಸಿ ಹತ್ಯೆಗೈದಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಆ.18ರಂದು ಏಳು ಮಂದಿಯನ್ನು ಹಾಗೂ ಆ.19ರಂದು 15 ಮಂದಿ ಆರೋಪಿಗಳನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದರು