×
Ad

ಅಂಬೇಡ್ಕರ್ ಹೆಸರೆತ್ತುವ ನೈತಿಕತೆ ಕಾಂಗ್ರೆಸ್‌ಗಿಲ್ಲಬಿ.ಎಸ್.ಯಡಿಯೂರಪ್ಪ

Update: 2016-09-18 00:30 IST

ಬೆಂಗಳೂರು, ಸೆ.17: ‘ಸಂವಿಧಾನಶಿಲ್ಪಿ’ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದಲ್ಲದೆ, ಅವರ ಅಂತ್ಯಸಂಸ್ಕಾರವನ್ನು ದಿಲ್ಲಿಯಲ್ಲಿ ಮಾಡಲು ಅವಕಾಶ ನೀಡದ ಕಾಂಗ್ರೆಸ್‌ನವರಿಗೆ ಅಂಬೇಡ್ಕರ್ ಹೆಸರನ್ನು ಹೇಳುವ ನೈತಿಕತೆಯಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಶನಿವಾರ ನಗರದ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಎಸ್ಸಿ ಮೋರ್ಚಾದ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಂಬೇಡ್ಕರ್‌ಗೆ ಸಂಬಂಧಿಸಿದ ಐದು ಪ್ರಮುಖ ಸ್ಥಳಗಳನ್ನು ತೀರ್ಥಕ್ಷೇತ್ರಗಳ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲು ಪ್ರಧಾನಿ ನರೇಂದ್ರಮೋದಿ ಸಂಕಲ್ಪ ಮಾಡಿದ್ದಾರೆ ಎಂದರು. ಬಿಜೆಪಿ ಕಾರ್ಯಕರ್ತರು ತಮ್ಮ ಮನೆಗಳಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧಿ ಹಾಗೂ ಅಂಬೇಡ್ಕರ್ ಅವರ ಭಾವಚಿತ್ರಗಳನ್ನು ಇಡುವಂತೆ ಸೂಚಿಸಿದ ಅವರು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರು ನಿರ್ಣಾಯಕವಾಗಿರುವ ಮತಕ್ಷೇತ್ರಗಳಲ್ಲಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬಿಜೆಪಿ ಅಭ್ಯರ್ಥಿ ಪರವಾಗಿ ಮತ ಚಲಾಯಿಸುವಂತೆ ಮಾಡಬೇಕು ಎಂದು ಕರೆ ನೀಡಿದರು.ೃಹ ಸಚಿವ ಪರಮೇಶ್ವರ್ ತಮ್ಮ ಕರ್ತವ್ಯವನ್ನು ನಿರ್ವಹಿಸುವ ಯೋಗ್ಯತೆಯಿಲ್ಲದೆ, ನಗರದಲ್ಲಿ ನಡೆದಂತಹ ಗಲಭೆಗಳಿಗೆ ಸಂಬಂಧಿಸಿದಂತೆ ಆರೆಸ್ಸೆಸ್ ವಿರುದ್ಧ ತನಿಖೆ ನಡೆಸುವುದಾಗಿ ಬೇಜವಾಬ್ದಾರಿ ಹೇಳಿಕೆ ನೀಡಿರುವುದು ತೀವ್ರ ಖಂಡನೀಯ ಎಂದು ಯಡಿಯೂರಪ್ಪ ಹೇಳಿದರು.
ರಾಜ್ಯದಲ್ಲಿ ಭೀಕರ ಬರಗಾಲದ ಪರಿಸ್ಥಿತಿಯಿದೆ. ಜನರು ಕುಡಿಯುವ ನೀರಿಗೂ ಪರದಾಡುವಂತಾಗಿದೆ. ಆದರೆ, ರಾಜ್ಯ ಸರಕಾರ ಜಲವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ಸಮರ್ಥವಾಗಿ ವಾದ ಮಂಡಿಸು ವಲ್ಲಿ ವಿಫಲವಾಗಿದೆ ಎಂದು ಅವರು ತಿಳಿಸಿದರು.
ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಸುಪ್ರೀಂಕೋರ್ಟ್ ಗಮನಕ್ಕೆ ತಂದು ರಾಜ್ಯದ ಜಲಾಶಯಗಳನ್ನು ವೀಕ್ಷಿಸುವ ನಿಟ್ಟಿನಲ್ಲಿ ತಜ್ಞರ ಸಮಿತಿಯನ್ನು ಕಳುಹಿಸಲು ಮನವಿ ಮಾಡುವಂತೆ ಬಿಜೆಪಿ ನೀಡಿದ್ದ ಸಲಹೆಯನ್ನು ಸರಕಾರ ಪರಿಗಣಿಸಲಿಲ್ಲ. ಆದುದರಿಂದಲೆ, ಈ ಸಮಸ್ಯೆ ಸೃಷ್ಟಿಯಾಗಿದೆ ಎಂದು ಯಡಿಯೂರಪ್ಪ ಕಿಡಿಗಾರಿದರು.
ಸಭೆಯಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದೆ ಶೋಭಾ ಕರಂದ್ಲಾಜೆ, ಎಸ್ಸಿ ಮೋರ್ಚಾ ಅಧ್ಯಕ್ಷ ಡಿ.ಎಸ್.ವೀರಯ್ಯ, ಮಾಜಿ ಸಚಿವ ಬಿ.ಸೋಮ ಶೇಖರ್, ಮುಖಂಡರಾದ ಎ.ಆರ್.ಕೃಷ್ಣಮೂರ್ತಿ, ಚಿ.ನಾ.ರಾಮು, ರವಿಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News