ತಮಿಳುನಾಡಿಗೆ ಕೃಷಿಗೆ ನೀರು ಕೊಡಲು ಸಾಧ್ಯವಿಲ್ಲ: ಸಚಿವ ಎಂಬಿ ಪಾಟೀಲ್ .
Update: 2016-09-18 12:34 IST
ಹೊಸದಿಲ್ಲಿ, ಸೆ.18: ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಿರುವ ರಾಜ್ಯಸರಕಾರ ನ್ಯಾಯಾಲಯದ ಆದೇಶದಂತೆ ತಮಿಳುನಾಡಿಗೆ ನೀರು ಹರಿಸಿದೆ. ಇನ್ನು ತಮಿಳುನಾಡಿನ ಕೃಷಿಗೆ ನೀರು ಕೊಡಲು ಸಾಧ್ಯವಿಲ್ಲ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.
ದಿಲ್ಲಿಯ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂಬಿ ಪಾಟೀಲ್ ಅವರು ಸುಪ್ರೀಂ ಕೋರ್ಟ್‌ಗೆ ಗೌರವ ಕೊಟ್ಟಿದ್ದೇವೆ. ಕೋರ್ಟ್ ಆದೇಶದಂತೆ ತಮಿಳುನಾಡಿಗೆ ನೀರು ಹರಿಸಲಾಗಿದೆ. ರಾಜ್ಯದಲ್ಲಿ ಇನ್ನು ನೀರು. ಇಲ್ಲ. ಹೀಗಾಗಿ ನೀರು ಕೊಡಲು ಸಾಧ್ಯವಿಲ್ಲ ಎಂದರು.