×
Ad

ಜನಮನ ಸೆಳೆದ ‘ಸಾಂಸ್ಕೃತಿಕ ವೆಭವ’

Update: 2016-09-18 22:24 IST

 ಕುಶಾಲನಗರ, ಸೆ.18 : ಯುವ ಜನಾಂಗವು ಕಲೆ, ಸಂಸ್ಕೃತಿ ಹಾಗೂ ಆಚಾರ ವಿಚಾರಗಳಿಗೆ ಹೆಚ್ಚಿನ ಒತ್ತು ನೀಡುವ ಮೂಲಕ ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಉತ್ತಮ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು ಎಂದು ತಾಲೂಕು ಕಸಾಪ ಮಾಜಿ ಅಧ್ಯಕ್ಷ ಟಿ.ಜಿ.ಪ್ರೇಮಕುಮಾರ್ ಹೇಳಿದರು.

  ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಡಿಕೇರಿ ಹಾಗೂ ತೊರೆನೂರು ವೀರಶೈವ ಸಮಾಜದ ಸಂಯುಕ್ತಾಶ್ರಯದಲ್ಲಿ ತೊರೆನೂರು ಗ್ರಾಮದಲ್ಲಿ ಶನಿವಾರ ರಾತ್ರಿ ಗಿರಿಜನ ಉಪ ಯೋಜನೆಯಡಿ ಏರ್ಪಡಿಸಿದ್ದ ೞಸಾಂಸ್ಕೃತಿಕ ವೈಭವೞಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ಗ್ರಾಮೀಣ ಕಲೆಗಳು ನಮ್ಮ ನಾಡಿನ ಸಂಸ್ಕೃತಿಯನ್ನು ಬಿಂಬಿಸುವಲ್ಲಿ ಸಹಕಾರಿಯಾಗಿವೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಸಮಾಜದ ಅಧ್ಯಕ್ಷ ಟಿ.ಬಿ.ಜಗದೀಶ್ ಮಾತನಾಡಿ, ಯುವಕರು ಗ್ರಾಮದಲ್ಲಿ ಸಹಬಾಳ್ವೆ ಹಾಗೂ ಭಾವೈಕ್ಯ ಮೂಡಿಸುವ ಚಟುವಟಿಕೆಗಳಿಗೆ ಆದ್ಯತೆ ನೀಡಬೇಕು ಎಂದರು.

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗಣೇಶ್ ಮತ್ತು ತಂಡದವರು ಡೊಳ್ಳು ಕುಣಿತ ಪ್ರದರ್ಶಿಸಿದರು. ಕಲಾವಿದ ವೆಂಕಟೇಶ್ ನಾಯಕ್ ಮತ್ತು ತಂಡದವರು ಜಾನಪದ ಗೀತೆಗಳನ್ನು ಹಾಡಿದರು. ಗ್ರಾಪಂ ಮಾಜಿ ಸದಸ್ಯ ಟಿ.ಎಸ್.ರಾಜಶೇಖರ್, ಸಮಾಜದ ಕಾರ್ಯದರ್ಶಿ ಟಿ.ವಿ.ಶಂಕರಮೂರ್ತಿ, ಡಿ.ಸಿ.ಸಿ.ಬ್ಯಾಂಕ್ ಅಧಿಕಾರಿ ಟಿ.ಎಸ್.ತುಂಗರಾಜ್, ಟಿ.ಎಸ್.ಚಂದ್ರಶೇಖರ್ ಮತ್ತಿತರರು ಇದ್ದರು. ಶಿಕ್ಷಕ ಚಂದ್ರಶೇಖರ್ ಸ್ವಾಗತಿಸಿ, ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News