ಸೆ.24ರಿಂದ ಸುಳ್ಯದಲ್ಲಿ ಮದ್ಯವರ್ಜನ ಶಿಬಿರ
Update: 2016-09-18 23:47 IST
ಸುಳ್ಯ, ಸೆ.18: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಜನಜಾಗೃತಿ ವೇದಿಕೆಯ ಆಶ್ರಯದಲ್ಲಿ 1,000ನೆ ಮದ್ಯವರ್ಜನ ಶಿಬಿರ 24ರಿಂದ ಸುಳ್ಯದ ಪುರಭವನದಲ್ಲಿ ನಡೆಯಲಿದೆ ಎಂದು ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಾರಾಯಣ ಕೇಕಡ್ಕ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸೆ.24ರಿಂದ 30ರವರೆಗೆ ಸುಳ್ಯದ ಪುರಭವನದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರ ಪಡೆದು ಶಿಬಿರವನ್ನು ನಡೆಸಲಾಗುವುದು. ಶಿಬಿರದ ಸಮಾರೋಪ ಸಮಾರಂಭ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಧರ್ಮಸ್ಥಳದಲ್ಲಿ ನಡೆಯುವುದು ಎಂದವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಜನಜಾಗೃತಿ ವೇದಿಕೆಯ ಅಧ್ಯಕ್ಷೆ ವಿಮಲಾ ರಂಗಯ್ಯ, ಬೂಡು ರಾಧಾಕೃಷ್ಣ ರೈ ಮತ್ತಿತರರು ಉಪಸ್ಥಿತರಿದ್ದರು.