×
Ad

ಧರ್ಮಸ್ಥಳ: ಭಜನಾ ತರಬೇತಿ ಕಮ್ಮಟಕ್ಕೆ ಚಾಲನೆ

Update: 2016-09-18 23:54 IST

 ಬೆಳ್ತಂಗಡಿ, ಸೆ.18: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್, ಶ್ರೀಕ್ಷೇತ್ರ ಧರ್ಮಸ್ಥಳ ವತಿಯಿಂದ ನಡೆಯುವ 18ನೆ ವರ್ಷದ ಭಜನಾ ತರಬೇತಿ ಕಮ್ಮಟಕ್ಕೆ ರವಿವಾರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಾಲನೆ ನೀಡಲಾಯಿತು.
ಕೊಂಡೆವೂರು ನಿತ್ಯಾನಂದ ಯೋಗಾಶ್ರಮದ ಯೋಗಾನಂದ ಸರಸ್ವತಿ ಸ್ವಾಮೀಜಿ ಉದ್ಘಾಟಿಸಿದರು. ಮಾಣಿಲ ಸೇವಾ ಪ್ರತಿಷ್ಠಾನದ ಮೋಹನದಾಸ ಸ್ವಾಮೀಜಿ ಮಾತನಾಡಿ , ಭಜನೆಯಿಂದ ಬದುಕು ಪರಿಶುದ್ಧವಾಗಬೇಕು ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿ ಭಜನಾ ಪರಿಷತ್‌ನ ಅಂತರ್ಜಾಲ ತಾಣಕ್ಕೆ ಚಾಲನೆ ನೀಡಿ ಮಾತನಾಡಿದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ, ಭಜನಾ ಕೇಂದ್ರಗಳು ಗ್ರಾಮದಲ್ಲಿ ಪರಿವರ್ತನೆಯನ್ನು ತರಬೇಕು. ಶಿಬಿರದಲ್ಲಿ ಭಾಗವಹಿಸಿದವರು ನಾಯಕತ್ವದ ಗುಣ ಬೆಳೆಸಿಕೊಳ್ಳಬೇಕು ಎಂಬ ಉದ್ದೇಶದಿಂದ ಕಮ್ಮಟವನ್ನು ಆಯೋಜಿಸಲಾಗಿದೆ ಎಂದರು.
ವೇದಿಕೆಯಲ್ಲಿ ಸಾಹಿತಿ ಏರ್ಯ ಲಕ್ಷ್ಮೀ ನಾರಾಯಣ ಆಳ್ವ, ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಯು.ವಿಜಯ ರಾಘವ ಪಡ್ವೆಟ್ನಾಯ, ಶಾಂತಿವನ ಟ್ರಸ್ಟ್‌ನ ಕಾರ್ಯದರ್ಶಿ ಸೀತಾರಾಮ ತೋಳ್ಪಡಿತ್ತಾಯ ಉಪಸ್ಥಿತರಿದ್ದರು.
ಕಾರ್ಯದರ್ಶಿ ಮಮತಾರಾವ್ ಅಂತರ್ಜಾಲ ತಾಣದ ಬಗ್ಗೆ ಮಾಹಿತಿ ನೀಡಿದರು.ಭಜನಾ ಕಮ್ಮಟ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಸ್ವಾಗತಿಸಿದರು. ಭಜನಾ ಪರಿಷತ್ ಕಾರ್ಯದರ್ಶಿ ಜಯರಾಮ ನೆಲ್ಲಿತ್ತಾಯ ವಂದಿಸಿದರು. ಶ್ರೀನಿವಾಸ ರಾವ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News