ಪ್ರಕರಣದ ಹಿಂದೆ ಯಾರಿದ್ದಾರೆ ಎಂಬ ಕುರಿತು ಸಮಗ್ರ ತನಿಖೆ ನಡೆಯಲಿ: ಸಚಿವ ಖಾದರ್
Update: 2016-09-19 16:54 IST
ಮಂಗಳೂರು, ಸೆ.19: ಮಂಗಳೂರು ವಿಶ್ವವಿದ್ಯಾನಿಲಯದ ವಿಜ್ಞಾನ ವಿಭಾಗದ ಮಹಿಳಾ ಶೌಚಾಲಯವೊಂದರಲ್ಲಿ ರಹಸ್ಯ ಮೊಬೈಲ್ ಕ್ಯಾಮರಾ ಇಟ್ಟ ಪ್ರಕರಣದ ಹಿಂದೆ ಯಾರಿದ್ದಾರೆ ಎನ್ನುವ ಕುರಿತು ಸಮಗ್ರ ತನಿಖೆ ನಡೆಯಬೇಕು ಎಂದು ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.
ಪ್ರಕರಣದ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಕ್ಯಾಮರಾವನ್ನು ಬಂಧನಕ್ಕೊಳಗಾಗಿದ್ದ ವಿದ್ಯಾರ್ಥಿ ಓರ್ವನೇ ಇಟ್ಟಿದ್ದನೇ ಅಥವಾ ಇನ್ನು ಯಾರಾದರೂ ಆತನೊಂದಿಗೆ ಶಾಮೀಲಾಗಿದ್ದಾರೆಯೇ? ಎನ್ನುವುದು ಸ್ಪಷ್ಟಗೊಳ್ಳಬೇಕಿದೆ. ಇದರ ಹಿಂದೆ ಯಾರಿದ್ದಾರೆ, ಯಾರ ಕುಮ್ಮಕ್ಕು ಇದೆ ಎನ್ನುವುದರ ಕುರಿತು ತನಿಖೆ ನಡೆಯಬೇಕು. ಈಗಾಗಲೇ ಜಾಮೀನು ಪಡೆದಿರುವ ಆರೋಪಿ ವಿದ್ಯಾರ್ಥಿಯನ್ನು ಮತ್ತೊಮ್ಮೆ ವಶಕ್ಕೆ ಪಡೆದು ಕೂಲಂಕುಷ ತನಿಖೆ ನಡೆಸಬೇಕು ಎಂದು ಹೇಳಿದರು.