×
Ad

ಸೆ.20ರಂದು ಮಂಗಳೂರಿಗೆ ನೀರು ಪೂರೈಕೆ ಇಲ್ಲ

Update: 2016-09-19 21:07 IST

ಮಂಗಳೂರು, ಸೆ. 19: ಮಂಗಳೂರು ಮಹಾನಗರ ಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯಲ್ಲಿ ನೀರು ಪೂರೈಕೆಯ ಮೂಲವಾದ ತುಂಬೆಯ ರೇಚಕ ಸ್ಥಾವರಗಳಿಗೆ ಮಂಗಳವಾರ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗುವುದೆಂದು ಮೆಸ್ಕಾಂ ತಿಳಿಸಿರುವ ಹಿನ್ನೆಲೆಯಲ್ಲಿ ಸೆ.20ರಂದು ಪೂರ್ವಾಹ್ನ 10ರಿಂದ ಸಂಜೆ 4 ಗಂಟೆಯವರೆಗೆ ಮಂಗಳೂರು ನಗರಪಾಲಿಕೆ ವ್ಯಾಪ್ತಿಯ ಪ್ರದೇಶಗಳಲ್ಲಿ ನೀರು ವಿತರಣೆಯನ್ನು ಸಂಪೂರ್ಣ ಸ್ಥಗಿತಗೊಳಿಸಲಾಗುವುದು.

ಸಾರ್ವಜನಿಕರು ಮಹಾನಗರಪಾಲಿಕೆಯೊಂದಿಗೆ ಸಹಕರಿಸಲು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News