×
Ad

ಜಿಲ್ಲಾ ಸ್ತ್ರೀ ಶಕ್ತಿ ಭವನ ವಿಸ್ತರಣಾ ಕಾಮಗಾರಿಗೆ ಶಿಲಾನ್ಯಾಸ

Update: 2016-09-20 15:13 IST

ಮಂಗಳೂರು, ಸೆ.20: ಬಿಜೈ ಕೆಎಸ್ಸಾರ್ಟಿಸಿ ಎದುರಿನ ಜಿಲ್ಲಾ ಸ್ತ್ರೀ ಶಕ್ತಿ ಭವನದ ವಿಸ್ತರಣಾ ಕಾಮಗಾರಿಗೆ ಇಂದು ಶಾಸಕ ಜೆ.ಆರ್. ಲೋಬೊ ಶಿಲಾನ್ಯಾಸ ನೆರವೇರಿಸಿದರು.

ನೆಲಮಹಡಿಯನ್ನು ಹೊಂದಿರುವ ಜಿಲ್ಲಾ ಸ್ತ್ರೀ ಶಕ್ತಿ ಭವನದಲ್ಲಿ ಎರಡು ಮಹಡಿ ಕಟ್ಟಡಗಳು ನಿರ್ಮಾಣವಾಗಲಿದ್ದು, ಅಲ್ಲಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಕಚೇರಿಗಳು ಸ್ಥಳಾಂತರಗೊಳ್ಳಲಿದೆ. ಒಟ್ಟು 69.50 ಲಕ್ಷ ರೂ. ವೆಚ್ಚದಲ್ಲಿ ಈ ವಿಸ್ತರಣಾ ಕಟ್ಟಡ ನಿರ್ಮಾಣಕ್ಕೆ ಮಂಜೂರಾತಿ ದೊರಕಿದ್ದು, ಮುಂದಿನ 8 ತಿಂಗಳಲ್ಲಿ ಕಾಮಗಾರಿ ಸಂಪೂರ್ಣವಾಗಲಿದೆ ಎಂದು ಲೋಬೊ ಹೇಳಿದರು.

ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 25 ಲಕ್ಷ ರೂ. ಬಿಡುಗಡೆಯಾಗಿದ್ದು, ಉಳಿದ ಮೊತ್ತ ಹಂತ ಹಂತವಾಗಿ ಬಿಡುಗಡೆಯಾಗಲಿದೆ. ನಗರದ ಕೇಂದ್ರ ಭಾಗದಲ್ಲಿ ಈ ಭವನವಿರುವುದರಿಂದ ಸಾರ್ವಜನಿಕರು ತಮ್ಮ ಕಚೇರಿ ಕೆಲಸ ಕಾರ್ಯಗಳಿಗೆ ಸುಲಭವಾಗಿ ಭೇಟಿ ನೀಡಲು ಸಾಧ್ಯವಾಗಲಿದೆ ಎಂದು ಅವರು ಹೇಳಿದರು.

ಈ ಸಂದರ್ಭ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಸುಂದರ ಪೂಜಾರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ಯಾಮಲಾ ಸಿ.ಕೆ., ಟಿ.ಕೆ. ಸುಧೀರ್, ರಮಾನಂದ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News