×
Ad

ಮಂಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ನಾಲ್ಕು ನಗರಗಳಿಗೆ ‘ಸ್ಮಾಟ್‌ಸಿಟಿ’ ಭಾಗ್ಯ

Update: 2016-09-20 18:02 IST

ಹೊಸದಿಲ್ಲಿ, ಸೆ.20: ಕೇಂದ್ರದ ಎನ್‌ಡಿಎ ಸರ್ಕಾರದ ಮಹಾತ್ವಾಕಾಂಕ್ಷೆಯ ‘ಸ್ಮಾರ್ಟ್ ಸಿಟಿ’ ಯೋಜನೆಯ ತೃತೀಯ ಪಟ್ಟಿಯಲ್ಲಿ 27 ನಗರಗಳನ್ನು ಆಯ್ಕೆ ಮಾಡಲಾಗಿದ್ದು ಇದರಲ್ಲಿ ಮಂಗಳೂರು, ಶಿವಮೊಗ್ಗ, ತುಮಕೂರು, ಹುಬ್ಬಳ್ಳಿ- ಧಾರವಾಡ ನಗರಗಳು ಸ್ಥಾನ ಪಡೆದಿವೆ. ಪ್ರಧಾನಿ ಮೋದಿ ಪ್ರತಿನಿಧಿಸುತ್ತಿರುವ ಸಂಸತ್ ಕ್ಷೇತ್ರವಾದ ವಾರಣಾಸಿ ಕೂಡಾ ಮೂರನೇ ಪಟ್ಟಿಯಲ್ಲಿ ಸ್ಥಾನ ಪಡೆದಿದೆ.

ಕಾನ್ಪುರ , ಆಗ್ರಾದ ಜೊತೆಗೆ, ಚುನಾವಣೆಯ ‘ಬಿಸಿ’ಯಲ್ಲಿರುವ ಪಂಜಾಬ್‌ನ ಅಮೃತ್‌ಸರ ಮತ್ತು ಲುಧಿಯಾನಾ, ಮುಂದಿನ ವರ್ಷ ಚುನಾವಣೆ ನಡೆಯಲಿರುವ ಉತ್ತರ ಪ್ರದೇಶದ ಮೂರು ನಗರಗಳು ಕೇಂದ್ರ ನಗರಾಭಿವೃದ್ಧಿ ಸಚಿವ ಎಂ.ವೆಂಕಯ್ಯ ನಾಯ್ಡು ಅವರು ಇಂದು ಬಿಡುಗಡೆ ಮಾಡಿರುವ ತೃತೀಯ ಪಟ್ಟಿಯಲ್ಲಿ ಸ್ಥಾನ ಪಡೆದಿವೆ.

ಪಶ್ಚಿಮ ಬಂಗಾಲ ಮತ್ತು ಬಿಹಾರದ ಯಾವುದೇ ನಗರಗಳು ಈ ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ. ಬಿಜೆಪಿ ಆಡಳಿತದ ರಾಜ್ಯಗಳು ಹೆಚ್ಚಿನ ‘ಫಲಾನುಭವಿಗಳಾಗಿವೆ ’. 27 ನಗರಗಳಲ್ಲಿ 10 ನಗರಗಳು ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಕ್ಕೆ ಸೇರಿದವು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News