×
Ad

ಸೆ. 28: ರೈತ ಸಂಘದಿಂದ ಪ್ರತಿಭಟನೆ: ಉದ್ದೇಗೌಡ

Update: 2016-09-20 22:19 IST

ಚಿಕ್ಕಮಗಳೂರು,   ೆ.20: ಜಿಲ್ಲೆಯಲ್ಲಿ ನಿರೀಕ್ಷಿತ ಮಳೆ ಆಗದಿರುವ ಕಾರಣ ಜಿಲ್ಲೆಯಲ್ಲಿ ಬರಗ ಲದ ಛಾಯೆ ಆವರಿಸಿದೆ. ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸುವ ಜೊತೆಗೆ ನಷ್ಟದಲ್ಲಿರುವ ರೈತರ ಬೇಡಿಕೆಗಳನ್ನು ಸರಕಾರ ಈಡೇರಿಸಬೇಕು ಎಂದು ಒತ್ತಾಯಿಸಿ ಸೆ. 28ರಂದು ರೈತ ಸಂಘದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿ್ಲಾ ರೈತ ಸಂಘದ ಹಿರಿಯ ಮುಖಂಡ ಉದ್ದೇಗೌಡ ತಿಳಿಸಿದರು.

ಚಿಕ್ಕಮಗಳೂರು ಪ್ರವಾಸಿ ಮಂದಿರದ ಆವರಣದಲ್ಲಿ ನಡೆದ ಜಿಲ್ಲಾ ರೈತ ಸಂಘದ ಜಿಲ್ಲಾ ಕಾರ್ಯಕರ್ತರ ಸಭೆೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಿಂದ ತೀವ್ರ ಬರಗಾಲ ಮುಂದುವರಿದಿದೆ. ಜಿಲ್ಲೆಯಲ್ಲಿ ರೈತರು ಬರಗಾಲದಿಂದ ತತ್ತರಿಸಿದ್ದು, ಗುಳೇ ಹೋಗುವಂತ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಆಗ್ರಹಿಸಿದರು. ರೈತರು ಬದುಕು ಸಾಗಿಸಲು ಸರಕಾರ ಎಕರೆ ಒಂದಕ್ಕೆ 30 ಸಾವಿರ ರೂ. ಪರಿಹಾರ ನೀಡಬೇಕು. ಮತ್ತು ಇಡೀ ಜಿಲ್ಲೆಯನ್ನು ಬರಗಾಲ ಪೀಡಿತ ಪ್ರದೇಶ ಎಂದು ಘೋಷಿಸಬೇಕು. ಹೊನ್ನಮ್ಮನ ಹಳ್ಳದಿಂದ ದಾಸರಹಳ್ಳಿ ಕೆರೆಗೆ ನೀರು ತುಂಬಿಸಿ ಆ ವ್ಯಾಪ್ತಿಯಲ್ಲಿ ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸಲು ಶೀಘ್ರವೇ ಕಾಮಗಾರಿ ಕೈಗೆತ್ತಿಕೊಳ್ಳಬೇಕು. ರೈತರ ಎಲ್ಲ ಬೆಳೆ ಸಾಲಗಳನ್ನು ಪೂರ್ಣ ಮನ್ನಾ ಮಾಡಬೇಕು. ಜಿಲ್ಲೆಯಲ್ಲಿ ಬಗರ್ ಹುಕುಂ ಜಮೀನು ಸಾಗುವಳಿ ಮಾಡುತ್ತಿರುವ ರೈತರಿಗೆ ಕೂಡಲೇ ಹಕ್ಕು ಪತ್ರ ವಿತರಿಸಬೇಕು ಎಂದು ಉದ್ದೇಗೌಡ ಸರಕಾರವನ್ನು ಒತ್ತಾಯಿಸಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿ ಕೊರತೆಯಿಂದಾಗಿ ರೋಗಿಗಳು ಪರದಾಡು ವಂತಾಗಿದೆ. ಚಿಕಿತ್ಸೆಗೆಂದು ದೂರದ ಹಾಸನ ಮತ್ತು ಮೈಸೂರಿಗೆ ಹೋಗಬೇಕಾದ ಪರಿಸ್ಥಿತಿ ಉಂಟಾಗಿದೆ ಆದ್ದರಿಂದ ಕೂಡಲೇ ವೈದ್ಯರನ್ನು ನೇಮಿಸಿ ಸಾರ್ವಜನಿಕರ ಸಹಾಯಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು. ಜಿಲ್ಲೆಯಲ್ಲಿ ಕಾಫಿ ಮತ್ತು ಮೆಣಸು ಬೆಳೆಗಳು ಬರದಿಂದ ಉದುರಿ ಹೋಗಿವೆ. ಈ ಬೆಳೆಗಾರರಿಗೆ ಎಕರೆಗೆ 50 ಸಾವಿರ ರೂ. ಪರಿಹಾರ ನೀಡಬೇಕು ಎಂದು ನಿರ್ಣಯ ಕೈಗೊಳ್ಳಲಾಗಿದೆ. ಈ ಎಲ್ಲ ಬೇಡಿಕೆಗಳನ್ನು ಸರಕಾರ ಕೂಡಲೇ ಬಗೆಹರಿಸುವಂತೆ ಒತ್ತಾಯಿಸಲು ಸೆ. 28ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೆೇರಿ ಮುಂಭಾಗದಲ್ಲಿ ಜಿಲ್ಲಾ ರೈತ ಸಂಘ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಸಭೆಯಲ್ಲಿ ಅವರು ಮಾಹಿತಿ ನೀಡಿದರು.

ಸಭೆಯಲ್ಲಿ ಮಂಡ್ಯ ಜಿಲ್ಲಾ ರೈತ ಸಂಘ ಅಧ್ಯಕ್ಷ ಬೋಣಪುರ ಶಂಕರೇಗೌಡ, ಜಿಲ್ಲಾ ರೈತ ಸಂಘದ ಖಜಾಂಚಿ ಸುಧೀರ್ ಕುಮಾರ್, ಮಂಡ್ಯ ಇಂಡುವಾಳು ಚಂದ್ರಶೇಖರ್, ಚಿಕ್ಕಮಗಳೂರು ಸಂಚಾಲಕ ಪುಟ್ಟಸ್ವಾಮಿ ಗೌಡ, ಮೂಡಿಗೆರೆ ತಾಲೂಕಿನ ರಘು, ಚಿಕ್ಕಮಗಳೂರಿನ ಎಂ. ಮಾಸ್ತೆಗೌಡ, ಮಂಡ್ಯ ಜಿಲ್ಲಾ ರೈತ ಸಂಘ ಕಾರ್ಯದರ್ಶಿ ರಾಮಲಿಂಗೇಗೌಡ, ಮೈಸೂರು ವಿಭಾಗೀಯ ಸದಸ್ಯ ಜೆ. ದಿನೇಶ್, ಚಿಕ್ಕಮಗಳೂರು ಹೊಸ್ತಾರೆಯ ಕೃಷ್ಣಮೂರ್ತಿ ಮತ್ತಿತರರು ಇದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News