×
Ad

ತುರ್ತು ವಿಧಾನಮಂಡಲ ಅಧಿವೇಶನಕ್ಕೆ ಮಂತ್ರಿ ಪರಿಷತ್ ಸಭೆ ನಿರ್ಧಾರ

Update: 2016-09-21 14:23 IST

ಬೆಂಗಳೂರು, ಸೆ.21: ಕಾವೇರಿ ನದಿ ನೀರಿನ ಹಂಚಿಕೆ ವಿವಾದಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್ ಮಂಗಳವಾರ ನೀಡಿರುವ ತೀರ್ಪಿನ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಬುಧವಾರ ವಿಧಾನಸೌಧದಲ್ಲಿ ರಾಜ್ಯ ಮಂತ್ರಿ ಪರಿಷತ್ ಸಭೆ ನಡೆಯಿತು. ಈ ಸಭೆಯಲ್ಲಿ ಶನಿವಾರ ತುರ್ತು ವಿಧಾನ ಮಂಡಲ ಅಧಿವೇಶನ ಕರೆಯಲು ನಿರ್ಧರಿಸಲಾಗಿದೆ.

ಸಭೆಯಲ್ಲಿದ್ದ ಬಹುತೇಕ ಸಚಿವರು ತಮಿಳುನಾಡಿಗೆ ಮತ್ತೆ ನೀರು ಬಿಡಬಾರದೆಂದು ಆಗ್ರಹಿಸಿದರು. ಸಂಜೆ ನಡೆಯುವ ಸರ್ವಪಕ್ಷ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News