ಕೋಡಿ: ಬ್ಯಾರೀಸ್ ಪದವಿ ಕಾಲೇಜಿನಲ್ಲಿ ಹಾಸ್ಯಸಿರಿ
Update: 2016-09-21 16:56 IST
ಕುಂದಾಪುರ, ಸೆ.21: ಕೋಡಿಯ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ಕಡಲ ಸಿರಿ ಸಾಂಸ್ಕೃತಿಕ ಸಂಘದ ವತಿಯಿಂದ ‘ಬದುಕಿನಲ್ಲಿ ಹಾಸ್ಯ’ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಉಪನ್ಯಾಸ ನೀಡಿದ ಕುಂದಾಪುರದ ಹಿರಿಯ ವಕೀಲ ಎ.ಎಸ್.ಎನ್. ಹೆಬ್ಬಾರ್, ತಮ್ಮ ಬದುಕಿನ ಹಾಸ್ಯಮಯ ಕ್ಷಣಗಳನ್ನು ಹಂಚಿಕೊಳ್ಳುವುದರೊಂದಿಗೆ ವಿದ್ಯಾರ್ಥಿ ಸಮೂಹವನ್ನು ನಗೆಗಡಲಿನಲ್ಲಿ ತೇಲಿಸಿದರು.
ಬ್ಯಾರೀಸ್ ಡಿ.ಎಡ್. ಪ್ರಾಂಶುಪಾಲೆ ಫಿರ್ದೋಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಶಮೀರ್, ವಿದ್ಯಾರ್ಥಿ ಸಾಂಸ್ಕೃತಿಕ ಕಾರ್ಯದರ್ಶಿ ಸುಚಿತ್ರಾ ಉಪಸ್ಥಿತರಿದ್ದರು.
ಸಾಂಸ್ಕೃತಿಕ ಸಂಘದ ಸಂಘಟಕ ಸಂದೀಪ ಶೆಟ್ಟಿ ಪ್ರಾಸ್ತವಿಕವಾಗಿ ಮಾತನಾಡಿದರು. ತೃತೀಯ ಬಿ.ಕಾಂ ವಿದ್ಯಾರ್ಥಿನಿ ಸುಶ್ಮಿತಾ ಅತಿಥಿಗಳನ್ನು ಪರಿಚಯಿಸಿದರು. ಪ್ರಥಮ ಬಿ.ಕಾಂ ವಿದ್ಯಾರ್ಥಿ ಶಶಾಂಕ ಸ್ವಾಗತಿಸಿದರು. ದ್ವಿತೀಯ ಬಿಸಿಎ ವಿದ್ಯಾರ್ಥಿ ಆದಿಲ್ ವಂದಿಸಿದರು. ತೃತೀಯ ಬಿ.ಕಾಂ ವಿದ್ಯಾರ್ಥಿನಿ ಅಶ್ವಿನಿ ಕಾರ್ಯಕ್ರಮ ನಿರೂಪಿಸಿದರು.