×
Ad

ಸೆ.28ರಂದು ಬೆಂಗಳೂರಿನಲ್ಲಿ ‘ಕರ್ನಾಟಕದಲ್ಲಿ ಗ್ರಾಮ ಸ್ವರಾಜ್’ ಸಂವಾದ: ಇಬ್ರಾಹೀಂ ಕೋಡಿಜಾಲ್

Update: 2016-09-21 17:52 IST

ಮಂಗಳೂರು, ಸೆ.21:ಕರ್ನಾಟಕ ಪ್ರದೇಶ ಕಾಂಗ್ರೆಸ್ ವತಿಯಿಂದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ವತಿಯಿಂದ ‘ಕರ್ನಾಟಕದಲ್ಲಿ ಗ್ರಾಮ ಸ್ವರಾಜ್’ ಎಂಬ ಸಂವಾದ ಸೆ.28ರಂದು ಬೆಳಗ್ಗೆ 9.30ಕ್ಕೆ ಬೆಂಗಳೂರಿನ ಚೌಡಯ್ಯ ಸ್ಮಾರಕ ಭವನದಲ್ಲಿ ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್ ಹೇಳಿದರು.

ನಗರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲಾ ಪಂಚಾಯತ್ ಸದಸ್ಯರು, ಎಲ್ಲ ತಾಲೂಕು ಪಂಚಾಯತ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಪ್ರತಿ ತಾಲೂಕಿನಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಸಾಮಾನ್ಯ ಮಹಿಳೆ ಸೇರಿದಂತೆ ಐದು ಗ್ರಾಮ ಪಂಚಾಯತ್ ಅಧ್ಯಕ್ಷರು, ಎಲ್ಲ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಕೆಪಿಸಿಸಿ ಪದಾಧಿಕಾರಿಗಳು, ಮುಂಚೂಣಿ ಘಟಕದ ಮುಖ್ಯಸ್ಥರು ಮತ್ತು ಪದಾಧಿಕಾರಿಗಳು, ವಿಧಾನ ಪರಿಷತ್ ಸದಸ್ಯರು, ಪರಾಜಿತ ಅಭ್ಯರ್ಥಿಗಳು ಮತ್ತು ರಾಜ್ಯದ ಪಂಚಾಯತ್‌ರಾಜ್ ಪ್ರಮುಖರು ಪಾಲ್ಗೊಳ್ಳುವರು ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡರಾದ ದಿಗ್ವಿಜಯ್ ಸಿಂಗ್, ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮಣಿಶಂಕರ್ ಅಯ್ಯರ್, ಜೈರಾಮ್ ರಮೇಶ್ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳುತ್ತಿದ್ದಾರೆ ಎಂದು ಅವರು ವಿವರಿಸಿದರು.

ಕಾಂಗ್ರೆಸ್ ಮುಖಂಡರಾದ ಅಶೋಕ್ ಡಿ.ಕೆ., ಪದ್ಮನಾಭ ನರಿಂಗಾನ, ಕೆ.ಬಲರಾಜ ರೈ, ಕೆ.ಅಶ್ರ್, ಬಾಲಕೃಷ್ಣ ಶೆಟ್ಟಿ, ನಝೀರ್ ಬಜಾಲ್, ಸಿ.ಎಂ.ಮುಸ್ತಾ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News