×
Ad

ಬೈಕ್‌ಗೆ ಟಿಪ್ಪರ್ ಢಿಕ್ಕಿ: ಇಂಜಿನಿಯರಿಂಗ್ ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು

Update: 2016-09-21 21:11 IST

ಮಂಗಳೂರು,ಸೆ. 21: ನಗರದ ಹೊರವಲಯ ನಾಗುರಿ ಜಂಕ್ಷನ್‌ನಲ್ಲಿ ಬುಧವಾರ ಸಂಜೆ ನಡೆದ ಅಪಘಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಅಡ್ಯಾರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಯಾಗಿರುವ ಭಟ್ಕಳ ಮೂಲದ ಮುಹಮ್ಮದ್ ರಯಾನ್ ಮೃತಪಟ್ಟ ವಿದ್ಯಾರ್ಥಿ. ರಯಾನ್ ಬುಧವಾರ ಸಂಜೆ ದ್ವಿಚಕ್ರ ವಾಹನದಲ್ಲಿ ಅಡ್ಯಾರ್‌ನಿಂದ ಮಂಗಳೂರಿಗೆ ಬರುತ್ತಿದ್ದ ಸಂದರ್ಭದಲ್ಲಿ ಅದೇ ಮಾರ್ಗದಲ್ಲಿ ಮಂಗಳೂರಿಗೆ ಬರುತ್ತಿದ್ದ ಟಿಪ್ಪರ್‌ಗೆ ಢಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ರಯಾನ್ ಟಿಪ್ಪರ್‌ನ ಹಿಂಬದಿಯ ಚಕ್ರದಡಿಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಬಗ್ಗೆ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News