×
Ad

ರಾಜ್ಯಮಟ್ಟದ ಕ್ರೀಡಾಕೂಟ ಉದ್ಘಾಟನೆ

Update: 2016-09-21 22:07 IST

ಕಾರವಾರ, ಸೆ.21: ಕ್ರೀಡಾ ಚಟುವಟಿಕೆಯಲ್ಲಿ ಬಾಲ್ಯದಿಂದಲೇ ಮಕ್ಕಳು ಪಾಲ್ಗೊಳ್ಳುವುದರಿಂದ ಭವಿಷ್ಯದಲ್ಲಿ ಕ್ರೀಡಾ ಜಗತ್ತಿನಲ್ಲಿ ಮಿಂಚಬಹುದು ಎಂದು ಮಾಜಿ ಸಚಿವ ಪ್ರಭಾಕರ ರಾಣೆ ಹೇಳಿದರು.

ಇಲ್ಲಿನ ಮಾಲಾದೇವಿ ಮೈದಾನದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಎರಡು ದಿನ ಗಳ ಕಾಲ ಆಯೋಜಿಸಿರುವ ರಾಜ್ಯಮಟ್ಟದ ಬಾಲ್‌ಬ್ಯಾಡ್ಮಿಂಟನ್ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

ಕ್ರೀಡಾ ಚಟುವಟಿಕೆಯಲ್ಲಿ ತೊಡಗುವವರು ಸೋಲು ಗೆಲುವುಗಳ ಬಗ್ಗೆ ಚಿಂತಿಸದೆ ತಮ್ಮ ಗುರಿಯತ್ತ ಮುನ್ನುಗ್ಗಲು ಪ್ರಯತ್ನಿಸಬೇಕು ಎಂದರು.

ವಿದ್ಯಾರ್ಥಿಗಳು ಸ್ಫೂರ್ತಿದಾಯಕ ಕ್ರೀಡಾಕೂಟ ಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಕ್ರೀಡಾ ಚಟುವಟಿಕೆಗಳನ್ನು ನಿರಂತರವಾಗಿ ಗಮನಿಸುವುದರಿಂದ ಹೆಚ್ಚಿನ ಉತ್ಸಾಹ ಮೂಡಲು ಸಾಧ್ಯ ಎಂದರು.

 ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ ಮಾತನಾಡಿ, ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಳ್ಳಲು ಇಚ್ಛಿಸುವ ಮಕ್ಕಳಿಗೆ ಇಂದು ಪಾಲಕರು ಹಾಗೂ ಶಿಕ್ಷಕರಿಂದ ಪ್ರೋತ್ಸಾಹದ ಕೆಲಸವಾಗಬೇಕು. ಇದರಿಂದ ವಿದ್ಯಾರ್ಥಿಗಳ ಜೀವನ ರೂಪುಗೊಳ್ಳುವುದಲ್ಲದೆ ಅವರು ಶಾರೀರಿಕವಾಗಿ ಆರೋಗ್ಯವಂತರಾಗಿರಲು ಸಾಧ್ಯವಾಗುತ್ತದೆ. ಆದ್ದರಿಂದ ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸಿದ ಪ್ರತಿಯೊಬ್ಬ ವಿದ್ಯಾರ್ಥಿಗಳು ಫಲಿತಾಂಶದ ಬಗ್ಗೆ ಚಿಂತಿಸದೆ ಉತ್ತಮ ಸ್ಪರ್ಧಾಳುಗಳಾಗಿ ಗುರುತಿಸಿಕೊಳ್ಳಬೇಕೆಂದರು. ಈ ವೇಳೆ ಡಿಡಿಪಿಐ ಕೆ.ಟಿ. ಭಟ್, ತಾಪಂ ಸದಸ್ಯ ಪ್ರಶಾಂತ ಗೋವೆಕರ್, ಸೌಭಾಗ್ಯಾ ನಾಯ್ಕ ಮತ್ತಿತರರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News