×
Ad

ಕಾವೇರಿ ತುಲಾ ಸಂಕ್ರಮಣ ಜಾತ್ರಾ : ಅಗತ್ಯ ಸಿದ್ಧತೆಗೆ ಡಿಸಿ ಸೂಚನೆ

Update: 2016-09-21 22:18 IST

ಮಡಿಕೇರಿ, ಸೆ.21: ನಾಡಿನ ಜೀವನದಿ ಕಾವೇರಿಯ ಉಗಮ ಸ್ಥಳ ತಲಕಾವೇರಿಯಲ್ಲಿ ಇದೇ ಅ. 17ರಂದು ಬೆಳಗ್ಗೆ 6:29 ಕ್ಕೆ ಜರಗುವ ಕಾವೇರಿ ತುಲಾ ಸಂಕ್ರಮಣ ಜಾತ್ರಾ ಮಹೋತ್ಸವಕ್ಕೆ ವಿವಿಧ ಇಲಾಖೆಗಳ ಅಧಿಕಾರಿಗಳು ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ನಿರ್ದೇಶನ ನೀಡಿದ್ದಾರೆ. 

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಕಾವೇರಿ ತುಲಾ ಸಂಕ್ರಮಣ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಾವೇರಿ ತುಲಾ ಸಂಕ್ರಮಣ ಜಾತ್ರಾ ಮಹೋತ್ಸವಕ್ಕೆ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವುದರಿಂದ ಭಾಗಮಂಡಲ ಮತ್ತು ತಲಕಾವೇರಿ ಕ್ಷೇತ್ರದಲ್ಲಿ ಭಕ್ತಾಧಿಗಳ ಅನುಕೂಲಕ್ಕೆ ಅಗತ್ಯ ಕ್ರಮಕೈಗೊಳ್ಳಬೇಕು. ಕುಂಡಿಕೆ ಬಳಿ ನೂಕುನುಗ್ಗಲು ಆಗದಂತೆ ಅಗತ್ಯ ಬ್ಯಾರಿಕೇಡ್‌ಗಳ ನಿರ್ಮಾಣ, ವಾಹನ ನಿಲುಗಡೆಗೆ ವ್ಯವಸ್ಥೆ, ಭಕ್ತಾಧಿಗಳಿಗೆ ಅಗತ್ಯ ಬಸ್ ಸೌಲಭ್ಯ ಕಲ್ಪಿಸುವುದು, ರಸ್ತೆ ಬದಿ ಗಿಡಗಂಟೆಗಳನ್ನು ಕಡಿಯುವುದು, ರಸ್ತೆಯ ಗುಂಡಿ ಮುಚ್ಚುವುದು, ರಾತ್ರಿ ವೇಳೆ ವಿದ್ಯುತ್ ಸಂಪರ್ಕ ಕಲ್ಪಿಸುವುದು, ಜೊತೆಗೆ ತಲಕಾವೇರಿಗೆ ಸಾಗುವ ಮಾರ್ಗದ ಉದ್ದಕ್ಕೂ ವಿದ್ಯುತ್ ದೀಪ ಅಳವಡಿಸುವುದು.

   

       

      

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News