×
Ad

ಸೆ.22ರಂದು ಡಿಕೆಎಸ್‌ಸಿಯ 20ನೆ ವಾರ್ಷಿಕೋತ್ಸವದ ಉದ್ಘಾಟನಾ ಸಮಾರಂಭ

Update: 2016-09-21 23:06 IST

ಮಂಗಳೂರು, ಸೆ.21: ದಕ್ಷಿಣ ಕರ್ನಾಟಕ ಸುನ್ನೀ ಸೆಂಟರ್ (ಡಿಕೆಎಸ್‌ಸಿ) 20ನೆ ವಾರ್ಷಿಕೋತ್ಸವದ ಉದ್ಘಾಟನಾ ಸಮಾರಂಭವು ಸೆ.22 ರಂದು ಮಧ್ಯಾಹ್ನ 2 ಗಂಟೆಗೆ ಪುರಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಎಸ್.ಎಂ.ರಶೀದ್ ಹಾಜಿ, ದ.ಕ. ಹಾಗೂ ಉಡುಪಿ ಜಿಲ್ಲೆಯ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಕೆ.ಎಸ್.ಮುಹಮ್ಮದ್ ಮಸೂದ್, ಉಳ್ಳಾಲ ದರ್ಗಾ ಸಮಿತಿಯ ಅಧ್ಯಕ್ಷ ಅಬ್ದುಲ್ ರಶೀದ್ ಹಾಜಿ, ಡಿಕೆಎಸ್‌ಸಿ ಸ್ಥಾಪಕಾಧ್ಯಕ್ಷ ಹಸನುಲ್ ಫೈಝಿ, ಸುನ್ನಿ ಜಂಇಯ್ಯತುಲ್ ಮುಅಲ್ಲಿಮೀನ್‌ನ ಅಧ್ಯಕ್ಷ ಸಅದ್ ಮುಸ್ಲಿಯಾರ್ ಆತೂರು, ಜಂ ಇಯ್ಯತುಲ್ ಮುಅಲ್ಲಿಮೀನ್ ಜಿಲ್ಲಾಧ್ಯಕ್ಷ ಕೆ.ಎಲ್.ಉಮರ್ ದಾರಿಮಿ ಪಟ್ಟೋರಿ, ಉಡುಪಿ ಜಿಲ್ಲಾ ಸಂಯುಕ್ತ ಜಮಾಅತ್ ಅಧ್ಯಕ್ಷ ಹಾಜಿ ಅಬ್ದುಲ್ಲಾ ತೌಫೀಕ್ ನಾವುಂದಾ, ಡಿಕೆಎಸ್‌ಸಿ ಕೇಂದ್ರ ಸಮಿತಿಯ ಕಾರ್ಯಾಧ್ಯಕ್ಷ ಯು.ಡಿ.ಅಬ್ದುಲ್ ಹಮೀದ್ ಉಳ್ಳಾಲ, ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ಇಸ್ಮಾಯೀಲ್ ಹಾಜಿ ಕಿನ್ಯ, ಅಲ್ ಇಹ್ಸಾನ್ ಎಜುಕೇಶನ್ ಸೆಂಟರ್‌ನ ವ್ಯವಸ್ಥಾಪಕ ಯು.ಕ.ಎಮುಸ್ತಫಾ ಸಅದಿ ಭಾಗವಹಿಸಲಿದ್ದಾರೆ.

ವಾರ್ಷಿಕೋತ್ಸವದ ಸಮಾರೋಪ ಸಮಾರಂಭವು ಡಿಸೆಂಬರ್ 2, 3 ಮತ್ತು 4ರಂದು ಡಿಕೆಎಸ್‌ಸಿ ಅಧೀನದ ಮೂಳೂರಿನಲ್ಲಿರುವ ಅಲ್ ಇಹ್ಸಾನ್ ಕ್ಯಾಂಪಸ್‌ನಲ್ಲಿ ನಡೆಯಲಿದೆ. ಡಿ.4ರಂದು 20 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News