ಕಾವೇರಿ ವಿವಾದ: ಸೆ.23ರಂದು ತುರ್ತು ಅಧಿವೇಶನ
Update: 2016-09-21 23:54 IST
ಬೆಂಗಳೂರು, ಸೆ.21: ಸುಪ್ರೀಂಕೋರ್ಟ್ ಆದೇಶದಂತೆ ತಮಿಳುನಾಡಿಗೆ ಕಾವೇರಿ ನೀರು ಹರಿಸುವ ನಿರ್ಧಾರವನ್ನು ಸೆ.23ರಂದು ನಡೆಯಲಿರುವ ವಿಧಾನಮಂಡಲದ ಉಭಯ ಸದನಗಳಲ್ಲಿ ನಿರ್ಣಯ ಕೈಗೊಳ್ಳುವವರೆಗೆ ಮುಂದೂಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬುಧವಾರ ರಾತ್ರಿ ನಡೆದ ತುರ್ತು ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ತುರ್ತು ಅಧಿವೇಶನವನ್ನು ಸೆ.23 ರಂದು ಬೆಳಗ್ಗೆ 11 ಗಂಟೆಗೆ ಸೇರುವಂತೆ ಕರೆಯುವ ನಿಟ್ಟಿನಲ್ಲಿ ರಾಜ್ಯಪಾಲರಿಗೆ ಶಿಫಾರಸ್ಸು ಮಾಡಲು ನಿರ್ಧರಿಸಲಾಗಿದೆ ಎಂದರು.
ಬಿಜೆಪಿ ನಾಯಕರು ಸರ್ವಪಕ್ಷಗಳ ಸಭೆಯಲ್ಲಿ ಪಾಲ್ಗೊಂಡಿರಲಿಲ್ಲ. ಸದನದಲ್ಲಿ ಪಾಲ್ಗೊಂಡು ಈ ನಿರ್ಣಯವನ್ನು ಅಂಗೀಕರಿಸಿಕೊಳ್ಳುವಂತೆ ಮನವಿ ಮಾಡಿಕೊಳ್ಳುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.