×
Ad

ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ

Update: 2016-09-21 23:57 IST

ಮಂಗಳೂರು, ಸೆ. 21: ಶಾಸ್ತಾವು ಶ್ರೀ ಭೂತನಾಥೇಶ್ವರ ಟ್ರಸ್ಟ್ ಮತ್ತು ದ.ಕ. ಜಿಲ್ಲಾ ಮಾಜಿ ಸೈನಿಕರ ಸಂಘದ ವತಿಯಿಂದ ಕಾಶ್ಮೀರದ ಉರಿ ಸೇನಾ ನೆಲೆಯಲ್ಲಿ ಉಗ್ರರ ದಾಳಿಯಿಂದ ಹುತಾತ್ಮರಾದ ಯೋಧ ರಿಗೆ ನಗರದ ಕದ್ರಿಯ ಯೋಧರ ಸ್ಮಾರಕದಲ್ಲಿ ಬುಧವಾರ ಸಂಜೆ ಶ್ರದ್ಧಾಂಜಲಿ ಸಲ್ಲಿಸಲಾ ಯಿತು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್, ಮಾಜಿ ಶಾಸಕ ಮೋನಪ್ಪ ಭಂಡಾರಿ, ಲಯನ್ ಜಿಲ್ಲಾ ಗವರ್ನರ್ ಎಂ.ಅರುಣ್ ಶೆಟ್ಟಿ, ರೋಟರಿ ಅಸಿಸ್ಟಂಟ್ ಗವರ್ನರ್ ವಿನಾಯಕ ಪ್ರಭು, ಶಾಸ್ತಾವು ಭೂತನಾಥೇಶ್ವರ ಟೆಂಪಲ್ ಟ್ರಸ್ಟ್‌ನ ಮಾನವ್ ವಿಜಯನಾಥ ಶೆಟ್ಟಿ, ಮಾಜಿ ಸೈನಿಕರ ಸಂಘದ ಅಧ್ಯಕ್ಷ ವಿಕ್ರಂ ದತ್ತ, ನಿಕಟಪೂರ್ವ ಅಧ್ಯಕ್ಷ ಕರ್ನಲ್ ಎನ್.ಎಸ್. ಭಂಡಾರಿ, ಪ್ರಧಾನ ಕಾರ್ಯದರ್ಶಿ ಎಸ್.ಎಂ.ಐರಾನ್, ಉಪಾಧ್ಯಕ್ಷ ರಾಘವೇಂದ್ರ ಭಟ್, ಜೊತೆ ಕಾರ್ಯದರ್ಶಿ ಎಂ.ಭಗವಾನ್ ಶೆಟ್ಟಿ, ಸಾರ್ವಜನಿಕರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಹುತಾತ್ಮ ಯೋಧರಿಗೆ ಮೊಂಬತ್ತಿ ಹಚ್ಚಿ ಪುಷ್ಪಾರ್ಚನೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News