×
Ad

ರಾಜ್ಯಪಾಲರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

Update: 2016-09-22 11:34 IST

ಬೆಂಗಳೂರು, ಸೆ.22: ವಿಧಾನ ಮಂಡಲದ ವಿಶೇಷ ಅಧಿವೇಶನ ಕರೆಯಲು ಅನುಮತಿ ಪಡೆಯಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಗುರುವಾರ ಬೆಳಗ್ಗೆ ರಾಜಭವನಕ್ಕೆ ಭೇಟಿ ನೀಡಿ ರಾಜ್ಯಪಾಲ ವಜೂಭಾಯಿ ವಾಲಾರನ್ನು ಭೇಟಿಯಾದರು. ಅಧಿವೇಶನ ನಡೆಸಲು ಅನುಮತಿ ಕೋರಿ ಮನವಿ ಸಲ್ಲಿಸಿದರು.

ತಮಿಳುನಾಡಿಗೆ ಸೆ.21 ರಿಂದ 27ರತನಕ ನಿತ್ಯ 6 ಸಾವಿರ ಕ್ಯೂಸಕ್ ನೀರು ಬಿಡುವಂತೆ ಸುಪ್ರೀಂಕೋರ್ಟ್ ನೀಡಿದ ಆದೇಶದ ಬಗ್ಗೆ ಚರ್ಚಿಸಲು ಶುಕ್ರವಾರ ವಿಧಾನ ಮಂಡಲದ ವಿಶೇಷ ಅಧಿವೇಶನ ಕರೆಯಲು ಇಲ್ಲಿ ಬುಧವಾರ ನಡೆದ ರಾಜ್ಯ ಸಚಿವ ಸಂಪುಟದ ತುರ್ತು ಸಭೆಯಲ್ಲಿ ತೀರ್ಮಾನಿಸಲಾಗಿತ್ತು.

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರ ಭೇಟಿಯ ವೇಳೆ ಸಚಿವರಾದ ಮಹದೇವ ಪ್ರಸಾದ್ ಹಾಗೂ ಎಚ್‌ಸಿ ಮಹದೇವಪ್ಪ ಸಾಥ್ ನೀಡಿದರು.

  ಸದಾಶಿವ ನಗರದಲ್ಲಿರುವ ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಕಾವೇರಿ ವಿವಾದಕ್ಕೆ ಸಂಬಂಧಿಸಿ ಚರ್ಚೆ ನಡೆಸಿದರು. ಸಿಎಂರೊಂದಿಗೆ ಟಿಬಿ ಜಯಚಂದ್ರ ಅವರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News