ದಿಲ್ಲಿಗೆ ದೌಡಾಯಿಸಿದ ಸಿಎಂ ಸಿದ್ದರಾಮಯ್ಯ
Update: 2016-09-22 13:08 IST
ಬೆಂಗಳೂರು, ಸೆ.22: ಕಾವೇರಿ ಉಳಿಸಿಕೊಳ್ಳಲು ಶತಪ್ರಯತ್ನ ನಡೆಸುತ್ತಿರುವ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಗುರುವಾರ ವಿಶೇಷ ವಿಮಾನದಲ್ಲಿ ದಿಲ್ಲಿಗೆ ಪ್ರಯಾಣ ಬೆಳೆಸಿದ್ದಾರೆ.
ದಿಲ್ಲಿಯಲ್ಲಿ ಕೇಂದ್ರ ಜಲ ಸಂಪನ್ಮೂಲ ಖಾತೆಯ ಸಚಿವೆ ಉಮಾಭಾರತಿಯನ್ನು ಭೇಟಿಯಾಗಲಿರುವ ಸಿದ್ದರಾಮಯ್ಯ ಅವಕಾಶ ಲಭಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಕಾವೇರಿ ನದಿ ನೀರು ಹಂಚಿಕೆ ವಿವಾದದ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಸಿದ್ದರಾಮಯ್ಯರೊಂದಿಗೆ ಸಚಿವ ಟಿ.ಬಿ.ಜಯಚಂದ್ರ ಹಾಗೂ ಮಾಜಿ ಸಚಿವ ಕೆಜೆ ಜಾರ್ಜ್ ಕೂಡ ದಿಲ್ಲಿಗೆ ತೆರಳಿದ್ದಾರೆ.