×
Ad

ಸೆ.25ರಂದು ಪುತ್ತೂರಿನಲ್ಲಿ ಪುರುಷರ ಪ್ರೊ ಮಾದರಿ ಕಬಡ್ಡಿ ಪಂದ್ಯಾಟ

Update: 2016-09-22 16:03 IST

ಪುತ್ತೂರು, ಸೆ.22: ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಮತ್ತು ತಾಲುಕು ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಆಶ್ರಯದಲ್ಲಿ ಅಹ್ವಾನಿತ ತಂಡಗಳ ಪ್ರೋ ಮಾದರಿ ಕಬಡ್ಡಿ ಪಂದ್ಯಾಟ ಸೆ.25ರಂದು ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯಲಿದೆ ಎಂದು ಅಸೋಸಿಯೇಶನ್ ಗೌರವ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ತಿಳಿಸಿದ್ದಾರೆ. ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಂದ್ಯಾಟವನ್ನು ಪುತ್ತೂರು ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಧಾಕರ ಶೆಟ್ಟಿ ಉದ್ಘಾಟಿಸಲಿದ್ದಾರೆ. ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಕೆ. ಸೀತಾರಾಮ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಶಾಸಕಿ ಶಕುಂತಳಾ ಶೆಟ್ಟಿ ವಹಿಸಲಿದ್ದಾರೆ. ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಬಹುಮಾನ ವಿತರಣೆ ಮಾಡಲಿದ್ದಾರೆ. ಪಂದ್ಯಾಟದ ವೇಳೆ ಚಲನಚಿತ್ರನಟರಾದ ಶಿವಧ್ವಜ್, ಸುಂದರ ರೈ ಮಂದಾರ ಮತ್ತು ಸಮನ್ವಿ ರೈ ಅತಿಥಿಗಳಾಗಿ ಭಾಗವಹಿಸುವರು. ಈ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಪಟು ಪ್ರೇಮನಾಥ ಶೆಟ್ಟಿ ಕಾವು ೆಅವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ತಾಲೂಕು ಘಟಕದ ಅಧ್ಯಕ್ಷ ಸುರೇಂದ್ರ ರೈ, ಕಾರ್ಯದರ್ಶಿ ದಯಾನಂದ ರೈ ಕೊರ್ಮಂಡ, ಪಂದ್ಯಾಟ ಸಮಿತಿಯ ಗೌರವ ಅಧ್ಯಕ್ಷ ಪ್ರಸನ್ನ ಕುಮಾರ್ ಶೆಟ್ಟಿ, ಅಧ್ಯಕ್ಷ ಪುರುಷೋತ್ತಮ ಗೌಡ ಕೋಲ್ಪೆ, ಕಾರ್ಯದರ್ಶಿ ರಫೀಕ್ ಎಂ.ಕೆ. ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News