ಸಂಪುಟಕ್ಕೆ ಕೆ.ಜೆ.ಜಾರ್ಜ್ ಸೇರ್ಪಡೆ?
Update: 2016-09-22 20:07 IST
ಬೆಂಗಳೂರು, ಸೆ.22: ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಮಾಜಿ ಸಚಿವ ಕೆ.ಜೆ.ಜಾರ್ಜ್ ಮತ್ತೆ ಸಂಪುಟ ಸೇರ್ಪಡೆಗೆ ಹೈಕಮಾಂಡ್ ಸಮ್ಮತಿ ನೀಡಿದೆ ಎಂದು ತಿಳಿದು ಬಂದಿದೆ.
ಗುರುವಾರ ಹೊಸದಿಲ್ಲಿಯಲ್ಲಿನ ಎಐಸಿಸಿ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್‌ಸಿಂಗ್ ಜೊತೆ ಮಾತುಕತೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಾರ್ಜ್ ಸಂಪುಟ ಸೇರ್ಪಡೆಗೆ ಅನುಮತಿ ಪಡೆದುಕೊಂಡಿದ್ದಾರೆ.
ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಜಾರ್ಜ್ ವಿರುದ್ಧ ಕೇಳಿಬಂದಿದ್ದ ಆರೋಪಗಳಿಂದ ಸಿಐಡಿ ತನಿಖಾ ತಂಡವು ಕ್ಲೀನ್‌ಚಿಟ್ ನೀಡಿರುವುದರಿಂದ, ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಲು ಹೈಕಮಾಂಡ್ ಒಪ್ಪಿಗೆ ಸೂಚಿಸಿದೆ ಎನ್ನಲಾಗಿದೆ.