×
Ad

ರಾಜ್ಯಮಟ್ಟದ ಬಾಲ್‌ಬ್ಯಾಡ್ಮಿಂಟನ್: ಆಳ್ವಾಸ್‌ಗೆ ಅವಳಿ ಪ್ರಶಸ್ತಿ

Update: 2016-09-22 21:11 IST

ಮೂಡುಬಿದಿರೆ, ಸೆ.22: ಪದವಿ ಪೂರ್ವ ಶಿಕ್ಷಣ ಇಲಾಖೆ ಬೆಂಗಳೂರು ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆ ಉತ್ತರ ಕನ್ನಡ ಇವರ ಸಂಯುಕ್ತ ಆಶ್ರಯದಲ್ಲಿ ಕಾರವಾರದಲ್ಲಿ ಮುಕ್ತಾಯಗೊಂಡ ರಾಜ್ಯ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲ್‌ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಮೂಡಬಿದಿರೆಯ ಆಳ್ವಾಸ್ ಪದವಿಪೂರ್ವ ಕಾಲೇಜಿನ ಬಾಲಕ ಹಾಗೂ ಬಾಲಕಿಯರು ಅವಳಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಬಾಲಕರ ವಿಭಾಗದ ಅಂತಿಮ ಪಂದ್ಯದಲ್ಲಿ ಆಳ್ವಾಸ್ ತಂಡ ಕೊಡಗು ಜಿಲ್ಲೆಯನ್ನು ಪ್ರತಿನಿಧಿಸಿದ ಮದಿಮಾದೇಶ್ವರಿ ಪ.ಪೂ ಕಾಲೇಜು ತಂಡವನ್ನು 29-6 ಹಾಗೂ 29-4 ನೇರಸೆಟ್‌ಗಳಿಂದ ಸೋಲಿಸಿ ಪ್ರಶಸ್ತಿಯನ್ನು ಗಳಿಸಿತು.

ಬಾಲಕಿಯರ ವಿಭಾಗದಲ್ಲಿ ಅಳ್ವಾಸ್ ತಂಡ ಹಾಸನ ಜಿಲ್ಲೆಯನ್ನು ಪ್ರತಿನಿಧಿಸಿದ ರಮನಾಥಪುರ ಪ.ಪೂ ಕಾಲೇಜು ತಂಡವನ್ನು 20-1 ಹಾಗೂ 20-3 ನೇರ ಸೆಟ್‌ಗಳಿಂದ ಸೋಲಿಸಿತು. ಈ ಮೂಲಕ ಆಳ್ವಾಸ್ ತಂಡ ತೆಲಂಗಾಣದಲ್ಲಿ ಜರುಗಲಿರುವ ರಾಷ್ಟ್ರೀಯ ಶಾಲಾ ಬಾಲ್‌ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಲು ಅರ್ಹತೆಯನ್ನು ಪಡೆದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News