ತಮಿಳುನಾಡು ಮುಖ್ಯ ಮಂತ್ರಿ ಜಯಲಲಿತಾ ಆಸ್ಪತ್ರೆಗೆ ದಾಖಲು
Update: 2016-09-23 10:16 IST
ಚೆನ್ನೈ, ಸೆ.23: ಜ್ವರ ಮತ್ತು ನಿರ್ಜಲೀಕರಣ ಸಮಸ್ಯೆಯಿಂದ ತಮಿಳುನಾಡು ಮುಖ್ಯ ಮಂತ್ರಿ ಜಯಲಲಿತಾ ಗುರುವಾರ ತಡರಾತ್ರಿ ಚೆನ್ನೈನ ಅಫೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಬಗ್ಗೆ ಆಸ್ಪತ್ರೆಯಿಂದ ಹೊರಡಿಸಲಾದ ಪತ್ರಿಕಾ ಪ್ರಕಟಣೆಯು "ಜಯಲಲಿತಾ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಅವರ ಆರೋಗ್ಯದ ಬಗ್ಗೆ ತೀವ್ರ ನಿಗಾ ವಹಿಸಲಾಗಿದೆ” ಎಂದು ತಿಳಿಸಿದೆ.
ಇತ್ತೀಚಿನ ದಿನಗಳಲ್ಲಿ ಜಯಲಲಿತಾ ಅವರ ಆರೋಗ್ಯ ಸ್ಥಿತಿ ಚೆನ್ನಾಗಿಲ್ಲ.. ಮಧುಮೇಹ, ತೀವ್ರ ರಕ್ತದೊತ್ತಡ ಮತ್ತು ಸಂಧಿವಾತದ ಸಮಸ್ಯೆ ಎದುರಿಸುತ್ತಿದ್ದಾರೆ.