ಶಸ್ತ್ರಾಸ್ತ್ರ ಒಯ್ಯುತ್ತಿದ್ದ ಶಂಕಿತರ ರೇಖಾ ಚಿತ್ರ ಬಿಡುಗಡೆ ಮಾಡಿದ ಮುಂಬೈ ಪೊಲೀಸರು!
Update: 2016-09-23 11:00 IST
ಮುಂಬೈ, ಸೆ.23: ಮುಂಬೈನಲ್ಲಿ ಗುರುವಾರ ಕಾಣಿಸಿಕೊಂಡ ಶಸ್ತ್ರಾಸ್ತ್ರ ಒಯ್ಯುತ್ತಿದ್ದ ಶಂಕಿತ ಉಗ್ರರಿಗಾಗಿ ವ್ಯಾಪಕ ಶೋಧ ಮುಂದುವರಿದಂತೆಯೇ ಶುಕ್ರವಾರ ಶಂಕಿತ ಉಗ್ರರ ರೇಖಾ ಚಿತ್ರ ಬಿಡುಗಡೆ ಮಾಡಲಾಗಿದೆ.
ಶಾಲಾ ಮಕ್ಕಳು ನೀಡಿದ ಮಾಹಿತಿ ಮೇರೆಗೆ ಶಂಕಿತರ ರೇಖಾಚಿತ್ರ ಚಿತ್ರ ತಯರಾಗಿದ್ದು, ಮುಂಬೈ ನಗರಾದ್ಯಂತ ಈ ಚಿತ್ರವನ್ನು ಎಲ್ಲ ಪೊಲೀಸ್ ಠಾಣೆಗಳಿಗೆ ರವಾನಿಸಲಾಗಿದೆ. ಮುಂಬೈ ನಗರಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ ಎಂದು ತಿಳಿದು ಬಂದಿದೆ.
ಶಂಕಿತ ಉಗ್ರರು ನಗರದಲ್ಲಿ ಇರುವ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆ ಯಾವುದೇ ಮಾಹಿತಿ ನೀಡಿಲ್ಲವಾದರೂ 2008ರಲ್ಲಿ ಮುಂಬೈ ಉಗ್ರ ದಾಳಿ ಹಿನ್ನಲೆಯಲ್ಲಿ ಇದೀಗ ಶಾಲಾ ಮಕ್ಕಳು ನೀಡಿರುವ ಮಾಹಿತಿಯನ್ನು ಆಧರಿಸಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
ಮುಂಬೈ ಕರಾವಳಿ ತೀರದಲ್ಲಿರುವ ನೌಕಾ ಶಸ್ತ್ರಾಸ್ತ್ರ ಸಂಗ್ರಹಾಗಾರ 'ಐಎನ್ ಎಸ್ ಅಭಿಮನ್ಯು' ಘಟಕಕ್ಕೆ ಒದಗಿಸಲಾಗಿರುವ ಭದ್ರತೆಯನ್ನು ತೀವ್ರಗೊಳಿಸಲಾಗಿದೆ.