ಕಾವೇರಿ ಕೊಳ್ಳದ ಡ್ಯಾಂಗಳ ನೀರು ಕುಡಿಯಲು ಮಾತ್ರ ಬಳಕೆ ; ವಿಧಾನಪರಿಷತ್ ನಲ್ಲಿ ನಿರ್ಣಯ ಅಂಗೀಕಾರ
ಬೆಂಗಳೂರು, ಸೆ.23:ಕಾವೇರಿ ಕೊಳ್ಳದ ಡ್ಯಾಂಗಳ ನೀರು ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಬಳಕೆ ಬಗ್ಗೆ ವಿಧಾನಪರಿಷತ್ ನಲ್ಲಿ ಮಂಡಸಲಾದ ನಿರ್ಣಯ ಸರ್ವಾನುಮತದಿಂದ ಅಂಗೀಕಾರಗೊಂಡಿದೆ.
ಸದಸ್ಯ ರವಿ ನಿರ್ಣಯ ಮಂಡಿಸಿದರು.ಬಳಿಕ ವಿಧಾನಪರಿಷತ್ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು. ವಿಧಾನ ಪರಿಷತ್ ಕಲಾಪದಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿದೆ.
ಕಾಂಗ್ರೆಸ್ ,ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಇದಕ್ಕೆ ಅನುಮೋದನೆ ನೀಡಿದರು. ಕಾವೇರಿ ಕೊಳ್ಳದ ನಾಲ್ಕೂ ಜಲಾಶಯಗಳಾದಎಸ್, ಕಬಿನಿ, ಹೇಮಾವತಿ ಮತ್ತು ಹಾರಂಗಿ ಜಲಾಶಯದ ಸುಮಾರು 27.5 ಟಿಎಂಸಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕಾಗಿ ಬಳಸಿಕೊಳ್ಳಬೇಕು. ಬೇರೆ ಯಾವುದೇ ಕಾರಣಕ್ಕೂ ಈ ನೀರನ್ನು ಒದಗಿಸಲು ಸಾಧ್ಯವಿಲ್ಲ ಎಂದು ಕಲಾಪದಲ್ಲಿ ನಿರ್ಣಯ ಕೈಗೊಳ್ಳಲಾಯಿತು
ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಎಸ್ ರವಿ ಅವರು ಮಂಡಿಸಿದ ಪ್ರಸ್ತಾವನೆಗೆ ಆಡಳಿತಾ ರೂಢ ಕಾಂಗ್ರೆಸ್ ಸೇರಿದಂತೆ, ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಅನುಮೋದನೆ ನೀಡಿದರು.