×
Ad

ಮೈಸೂರು ವಿಭಾಗೀಯ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ

Update: 2016-09-23 21:30 IST

ಉಡುಪಿ, ಸೆ.23: ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾಡಳಿತ ಮತ್ತು ಜಿಪಂಗಳ ಸಹಯೋಗದೊಂದಿಗೆ ನಗರದ ಅಜ್ಜರಕಾಡಿ ನಲ್ಲಿರುವ ಮಹಾತ್ಮಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ಆಯೋಜಿಸಿದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟವನ್ನು ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು ಬಲೂನುಗಳನ್ನು ಹಾರಿ ಬಿಡುವ ಮೂಲಕ ಇಂದು ಸಂಜೆ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಯಾವುದೇ ಕ್ರೀಡಾಕೂಟ ವನ್ನೂ ಅತ್ಯಂತ ಸುವ್ಯವಸ್ಥಿತವಾಗಿ ನಡೆಸಿಕೊಂಡು ಬರುವ ಉಡುಪಿ ಈ ಮೈಸೂರು ವಿಭಾಗ ಮಟ್ಟದ ಕ್ರೀಡಾಕೂಟವನ್ನು ಸಹ ಅತ್ಯಂತ ವ್ಯವಸ್ಥಿತವಾಗಿ, ಕ್ರೀಡಾಪಟುಗಳಿಗೆ ಯಾವುದೇ ಕೊರತೆಯಾಗದಂತೆ ನಿರ್ವಹಿಸಲಿದೆ ಎಂದರು.

ಉಡುಪಿ ಜಿಪಂನ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಉದಯ ಎಸ್.ಕೋಟ್ಯಾನ್, ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ದಿನೇಶ್ ಪುತ್ರನ್, ಮಂಗಳೂರಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕ ಪ್ರದೀಪ್, ಉಡುಪಿ ತಾಲೂಕು ಕ್ರೀಡಾ ಅಧಿಕಾರಿ ನಾರಾಯಣ ರಾವ್, ಸಾರ್ವಜನಿಕ ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಮಧುಕರ್ ಉಪಸ್ಥಿತರಿದ್ದರು.

ಉಡುಪಿಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿ ಸತೀಶ್ ಚಿತ್ರಪಾಡಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News