ಶ್ರೀನಿವಾಸ್ ಸ್ಕೂಲ್ ಆಫ್ ಇಂಜಿನಿಯರಿಂಗ್‌ನಲ್ಲಿ ‘ಐಸಾಪ್-2016’ ಕಾರ್ಯಕ್ರಮ
ಮಂಗಳೂರು, ಸೆ.24: ಮುಕ್ಕದಲ್ಲಿರುವ ಶ್ರೀನಿವಾಸ್ ಸ್ಕೂಲ್ ಆಫ್ ಇಂಜಿನಿಯರಿಂಗ್‌ನಲ್ಲಿ ಐಸಾಪ್-2016 (ಇನ್ಫಾರ್ಮೇಶನ್ ಸರ್ಚ್, ಅನಾಲಿಸಿಸ್ ಮತ್ತು ಪ್ರೆಸಂಟೇಶನ್) ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಇಂದು ಜರಗಿತು. ಕಟೀಲಿನ ಶ್ರೀ ದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ.ಜಯರಾಮ ಪೂಂಜಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಒಂದು ದಿನದಲ್ಲಿ 300ಕ್ಕೂ ಅಧಿಕ ತಾಂತ್ರಿಕ ವಿಷಯಗಳನ್ನು ಪ್ರಸ್ತುತಪಡಿಸುವ ಐಸಾಪ್ ಕಾರ್ಯಕ್ರಮ ಮತ್ತು ಅದರ ಉದ್ದೇಶಗಳ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಸರ್ ಎಂ.ವಿಶ್ವೇಶ್ವರಯ್ಯರವರ ಕೊಡುಗೆಗಳ ಬಗ್ಗೆ ಪ್ರಸ್ತಾವಿಸಿದ ಅವರು, ಇಂದಿನ ಇಂಜಿನಿಯರಿಂಗ್ ವಿದ್ಯಾರ್ಥಿ ಸಮುದಾಯವು ವಿಶ್ವೇಶ್ವರಯ್ಯರವರ ಧ್ಯೇಯ-ಉದ್ಧೇಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು, ತಮ್ಮ ಸ್ವಂತಿಕೆಯ ಮೂಲಕ ಬದುಕಿನಲ್ಲಿ ನಿಜವಾದ ಅರ್ಥವನ್ನು ಕಂಡುಕೊಳ್ಳುವಂತಾಗಬೇಕು ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದಶ್ರೀನಿವಾಸ್ ಸ್ಕೂಲ್ ಆಫ್ ಇಂಜಿನಿಯರಿಂಗ್‌ನ ಪ್ರಾಂಶುಪಾಲ ಡಾ.ಶ್ರೀಪ್ರಕಾಶ್ ಬಿ. ಮಾತನಾಡಿ, ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವನ್ನು ಮೂಡಿಸಿ, ಅವರನ್ನು ಹುರಿದುಂಬಿಸಿ, ಪ್ರೋತ್ಸಾಹಿಸುವಲ್ಲಿ ಐಸಾಪ್ ಕಳೆದ ಹಲವರು ವರ್ಷಗಳಿಂದ ಉತ್ತಮವಾದ ಅವಕಾಶವನ್ನು ನೀಡುತ್ತಿದೆ ಎಂದು ಹೇಳಿದರು. ದ್ವಿತೀಯ ವರ್ಷದ ವಿವಿಧ ವಿಭಾಗಗಳ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸುಮೂರು 300 ಕ್ಕೂ ಅಧಿಕ ತಾಂತ್ರಿಕ ವಿಷಯಗಳನ್ನು ಸಮಗ್ರವಾಗಿ ಅಭ್ಯಸಿಸಿ, ಕೇವಲ ಒಂದು ದಿನದಲ್ಲಿ ಈ ಎಲ್ಲಾ ಸೆಮಿನಾರ್‌ಗಳನ್ನು ಪ್ರಸ್ತುತಪಡಿಸಲಿದ್ದಾರೆ ಎಂದರು.
ಕಾಲೇಜಿನ ಉಪಪ್ರಾಂಶುಪಾಲ ಹಾಗೂ ಐಸಾಪ್-2016ರ ಸಂಚಾಲಕ ಡಾ. ರಾಮಕೃಷ್ಣ ಹೆಗಡೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥೆ ಡಾ.ಸುಮಾ ಭಟ್ ಸ್ವಾಗತಿಸಿದರು. ಇಂಜಿನಿಯರಿಂಗ್ ವಿದ್ಯಾರ್ಥಿನಿ ಚೈತ್ರಾ ಭಟ್ ಪ್ರಾರ್ಥಿಸಿದರು. ಕಂಪ್ಯೂಟರ್ ಸೈನ್ಸ್ ಆ್ಯಂಡ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಪ್ರೊ.ಕಿಶೋರ್ ಭಾಗ್ಲೋಡಿ ಅತಿಥಿಗಳನ್ನು ಪರಿಚಯಿಸಿದರು. ಇಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಪ್ರೊ.ಶ್ರೀಗಣೇಶ್ ಕೆದಿಲಾಯ ವಂದಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ವಿವಿಧ ಶೈಕ್ಷಣಿಕ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.