×
Ad

ಶ್ರೀನಿವಾಸ್ ಸ್ಕೂಲ್ ಅಫ್ ಇಂಜಿನಿಯರಿಂಗ್‌ನಲ್ಲಿ ‘ಐಸಾಪ್-2016’

Update: 2016-09-24 20:37 IST

ಮಂಗಳೂರು, ಸೆ. 23: ಮುಕ್ಕದಲ್ಲಿರುವ ಶ್ರೀನಿವಾಸ್ ಸ್ಕೂಲ್ ಆಫ್ ಎಂಜಿನಿಯರಿಂಗ್‌ನಲ್ಲಿ ‘ಐಸಾಪ್-2016’ (ಇನ್ಫಾರ್ಮೇಶನ್ ಸರ್ಚ್, ಅನಾಲಿಸಿಸ್ ಮತ್ತು ಪ್ರಸಂಟೇಶನ್) ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಜರುಗಿತು. ಶ್ರೀನಿವಾಸ್ ಸ್ಕೂಲ್ ಅಫ್ ಎಂಜಿನಿಯರಿಂಗ್‌ನ ಪ್ರಾಂಶುಪಾಲ ಡಾ. ಪ್ರಕಾಶ್ ಬಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ. ಜಯರಾಮ ಪೂಂಜ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾಲೇಜಿನ ಉಪಪ್ರಾಂಶುಪಾಲ ಮತ್ತು ಐಸಾಪ್-2016ರ ಸಂಚಾಲಕ ಡಾ. ರಾಮಕೃಷ್ಣ ಹೆಗಡೆ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಡಾ. ರಾಮಕೃಷ್ಣ ಹೆಗಡೆ, ಎಂಜಿನಿಯರಿಂಗ್ ವಿದ್ಯಾರ್ಥಿಗಳ ನಾಯಕತ್ವ ಬೆಳವಣಿಗೆ ಮತ್ತು ಸಂವಹನ ಕೌಶಲ್ಯದ ಸಮಗ್ರ ಬೆಳವಣಿಗೆಯಲ್ಲಿ ಐಸಾಪ್ ಕಾರ್ಯಕ್ರಮ ಪ್ರಮುಖ ಪಾತ್ರ ವಹಿಸುತ್ತಿದೆ ಎಂದರು.

ಉದ್ಘಾಟನಾ ಭಾಷಣ ಮಾಡಿದ ಪ್ರೊ. ಜಯರಾಮ ಪೂಂಜ, ಜಾಗತೀಕರಣದಿಂದಾಗಿ ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಭಾರತದ ಎಂಜಿನಿಯರ್‌ಗಳಿಗೆ ದೇಶದಲ್ಲಿ ಉತ್ತಮವಾದ ಅವಕಾಶಗಳಿದ್ದು, ದೇಶದ ಆರ್ಥಿಕ ಮತ್ತು ಸಾಮಾಜಿಕ ಬೆಳವಣಿಗೆಗೆ ಉತ್ತಮ ಕೊಡುಗೆಯನ್ನು ನೀಡುವಂತಾಗಬೇಕು. ವ್ಯರ್ಥ ಕಾಲಹರಣ ಮಾಡದೆ, ಉತ್ತಮ ತರಬೇತಿ, ಕಠಿಣ ಪರಿಶ್ರಮ, ಛಲ, ಆತ್ಮವಿಶ್ವಾಸ ಮತ್ತು ನಿಖರ ಧ್ಯೇಯಗಳ ಮೂಲಕ ಜೀವನದಲ್ಲಿ ಯಶಸ್ಸನ್ನು ಹೊಂದಬೇಕು ಎಂದು ನೆರೆದ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅಧ್ಯಕ್ಷೀಯ ಭಾಷಣ ಮಾಡಿದ ಪ್ರಾಂಶುಪಾ ಡಾ. ಪ್ರಕಾಶ್ ಬಿ., ಎಂಜಿನಿಯರಿಂಗ್ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವನ್ನು ತುಂಬಿ, ಅವರನ್ನು ಪ್ರೋತ್ಸಾಸುವಲ್ಲಿ ನಿಟ್ಟಿನಲ್ಲಿ ಐಸಾಪ್ ಕಳೆದ ಹಲವು ವರ್ಷಗಳಿಂದ ಉತ್ತಮ ಅವಕಾಶವನ್ನು ಕಲ್ಪಿಸುತ್ತಿದೆ ಎಂದು ಹೇಳಿದರು. ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ಸುಮಾ ಭಟ್ ಸ್ವಾಗತಿಸಿದರು. ಎಂಜಿನಿಯರಿಂಗ್ ವಿದ್ಯಾರ್ಥಿನಿ ಕುಮಾರಿ ಚೈತ್ರಾ ಭಟ್ ಪ್ರಾರ್ಥಿಸಿದರು. ಕಂಪ್ಯೂಟರ್ ಸೈನ್ಸ್ ಆ್ಯಂಡ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಪ್ರೊ. ಕಿಶೋರ್ ಭಾಗ್ಲೋಡಿ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ಎಲೆಕ್ಟ್ರೋನಿಕ್ಸ್ ಆ್ಯಂಡ್ ಕಮ್ಯುನಿಕೇಶನ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಪ್ರೊ.ಗಣೇಶ್ ಕೆದಿಲಾಯ ವಂದಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ವಿವಿಧ ಶೈಕ್ಷಣಿಕ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು, ವಿದ್ಯಾರ್ಥಿಗಳು ಮತ್ತು ಸಿಬಂದಿ ವರ್ಗದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News