ಫಿಲಿಪ್ಪೀನ್ಸ್ನಲ್ಲಿ ಪ್ರಬಲ ಭೂಕಂಪ: ಸುನಾಮಿಯಿಲ್ಲ
Update: 2016-09-25 00:03 IST
ಮನಿಲಾ, ಸೆ. 24: ದಕ್ಷಿಣ ಫಿಲಿಪ್ಪೀನ್ಸ್‌ನ ಸಮುದ್ರದಲ್ಲಿ ಶನಿವಾರ ಮುಂಜಾನೆ ರಿಕ್ಟರ್ ಮಾಪಕದಲ್ಲಿ 6.3ರ ತೀವ್ರತೆ ಹೊಂದಿದ್ದ ಭೂಕಂಪ ಸಂಭವಿಸಿದೆ ಎಂದು ಭೂಕಂಪ ಶಾಸ್ತ್ರ ಇಲಾಖೆ ಮತ್ತು ವಿಪತ್ತು ನಿರ್ವಹಣಾ ಅಧಿಕಾರಿಗಳು ಹೇಳಿದ್ದಾರೆ. ಆದಾಗ್ಯೂ, ಸುನಾಮಿ ಎಚ್ಚರಿಕೆಯನ್ನು ಹೊರಡಿಸಲಾಗಿಲ್ಲ ಹಾಗೂ ಯಾವುದೇ ಸಾವು-ನೋವು ಅಥವಾ ನಷ್ಟ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.