ಉರುಳಿ ಬಿದ್ದ ನರ್ಮ್ ಬಸ್: ಇಬ್ಬರಿಗೆ ಗಾಯ
Update: 2016-09-25 11:46 IST
ಮಂಗಳೂರು, ಸೆ.25: ಸರಕಾರಿ ಬಸ್ಸೊಂದು ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ನಗರದ ಹೊರವಲಯದ ಉಳಾಯಿಬೆಟ್ಟು ಬಳಿ ಇಂದು ಬೆಳಗ್ಗೆ ಸಂಭವಿಸಿದೆ.
ಉಳಾಯಿ ಬೆಟ್ಟು ಬಳಿ ಬಸ್ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬವೊಂದಕ್ಕೆ ಢಿಕ್ಕಿ ಹೊಡೆದಿದ್ದು, ಬಳಿಕ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿಬಿದ್ದಿದೆ ಎನ್ನಲಾಗಿದೆ. ಘಟನೆಯ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಇಂದು ರವಿವಾರವಾದ ಹಿನ್ನೆಲೆಯಲ್ಲಿ ಬಸ್‌ನಲ್ಲಿ ಕೇವಲ 6 ಮಂದಿ ಪ್ರಯಾಣಿಕರಿದ್ದರು. ಸಾಮಾನ್ಯವಾಗಿ ವಾರದ ಇತರ ದಿನಗಳಲ್ಲಿ ವಿದ್ಯಾರ್ಥಿಗಳು ಅಧಿಕ ಸಂಖ್ಯೆಯಲ್ಲಿ ಈ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಇಂದು ರಜಾದಿನದ ಕಾರಣ ವಿದ್ಯಾರ್ಥಿಗಳು ಇರದ ಹಿನ್ನೆಲೆಯಲ್ಲಿ ಸಂಭಾವ್ಯ ಅವಘಡ ತಪ್ಪಿದಂತಾಗಿದೆ.