×
Ad

ಮನೆಯಂಗಳದಲ್ಲಿ ಸಾಹಿತ್ಯ ಕಾರ್ಯಕ್ರಮಕ್ಕೆ ಚಾಲನೆ

Update: 2016-09-25 17:05 IST

ಸುಳ್ಯ, ಸೆ.25: ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಮನೆಯಂಗಳದಲ್ಲಿ ಸಾಹಿತ್ಯ ಕಾರ್ಯಕ್ರಮವು ಜ್ಯೋತಿ ವೃತ್ತದ ಬಳಿ ಓಂಕಾರ ಸದನದಲ್ಲಿ ನಡೆಯಿತು.

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಹರಪ್ರಸಾದ್ ತುದಿಯಡ್ಕ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ಸಾಹಿತಿ ಜಯಮ್ಮ ಚೆಟ್ಟಿಮಾಡ ಉದ್ಘಾಟಿಸಿದರು. ಪುತ್ತೂರು ಸಂತ ಫಿಲೋಮಿನ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ವಿಜಯ ಕುಮಾರ್ ಮೊಳೆಯಾರ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಬೆಳ್ಳಾರೆ ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ವಿಭಾಶ್ರೀ ಎಂ.ಎಸ್., ಸುಳ್ಯ ಸೈಂಟ್ ಜೋಸೆಫ್ ಶಾಲೆಯ ಸಾಹಿತ್ಯ, ಸುಳ್ಯ ರೋಟರಿ ಪ್ರಾಥಮಿಕ ಶಾಲೆಯ ಕನ್ನಿಕಾ, ಸನಿಹಾ ಶೆಟ್ಟಿ, ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನ ಆಶಾಕಾವ್ಯ, ರಾಘವೇಂದ್ರ ಆರ್, ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಣವ ಮೂಡಿತ್ತಾಯ, ಸುಮಿತ್‌ರಾಜ್, ಕೋಲ್ಚಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸೋಮಿಲಾ ರಾಮ್ ಕೆ.ಎಸ್, ಜನ್ವಿತ್ ಕೆ.ಸಿ., ಪುತ್ತೂರು ಅಂಬಿಕಾ ವಿದ್ಯಾಲಯದ ಪ್ರಥಮ ಮೂಡಿತ್ತಾಯ ಭಾಗವಹಿಸಿದ್ದರು.

ಗೌರವ ಕಾರ್ಯದರ್ಶಿಗಳಾದ ಚಂದ್ರಶೇಖರ ಪೇರಾಲು, ತೇಜಸ್ವಿ ಕಡಪಳ, ಕಾರ್ಯಕ್ರಮ ಸಂಯೋಜಕಿ ಮಮತಾ ಮೂಡಿತ್ತಾಯ ಉಪಸ್ಥಿತರಿದ್ದರು. ಪ್ರಕಾಶ್ ಮೂಡಿತ್ತಾಯ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News