ನ್ಯೂಯಾರ್ಕ್‌ಗೆ ಆಗಮಿಸಿದ ಸುಶ್ಮಾ; ಇಂದು ವಿಶ್ವಸಂಸ್ಥೆಯಲ್ಲಿ ಭಾಷಣ

Update: 2016-09-25 18:50 GMT

ನ್ಯೂಯಾರ್ಕ್, ಸೆ. 25: ವಿಶ್ವಸಂಸ್ಥೆಯ 71ನೆ ಮಹಾಧಿವೇಶನದಲ್ಲಿ ಭಾಷಣ ಮಾಡುವುದಕ್ಕಾಗಿ ವಿದೇಶಾಂಗ ಸಚಿವೆ ಸುಶ್ಮಾ ಸ್ವರಾಜ್ ಇಲ್ಲಿಗೆ ಆಗಮಿಸಿದ್ದಾರೆ.
ಸುಶ್ಮಾ ಶನಿವಾರ ಮಧ್ಯಾಹ್ನ ಇಲ್ಲಿ ಬಂದಿಳಿದರು. ಅವರು ಸೋಮವಾರ ಬೆಳಗ್ಗೆ ವಿಶ್ವಸಂಸ್ಥೆಯಲ್ಲಿ ಭಾಷಣ ಮಾಡಲಿದ್ದಾರೆ.

ತನ್ನ ಭಾಷಣದಲ್ಲಿ ಕಾಶ್ಮೀರ ವಿಷಯವನ್ನು ಪ್ರಸ್ತಾಪಿಸಿ ಭಾರತದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಪಾಕಿಸ್ತಾನದ ಪ್ರಧಾನಿ ನವಾಝ್ ಶರೀಫ್‌ರಿಗೆ ಸುಶ್ಮಾ ಪ್ರಬಲ ತಿರುಗೇಟು ನೀಡಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News