ಆದೇಶದಲ್ಲಿ ಮಾರ್ಪಾಡು ಮಾಡಲು ಕರ್ನಾಟಕದ ಅರ್ಜಿ ನಾಳೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ
Update: 2016-09-26 14:51 IST
ಹೊಸದಿಲ್ಲಿ, ಸೆ.26: ರಾಜ್ಯದಲ್ಲಿ ಕುಡಿಯಲು ಮಾತ್ರ ನೀರಿದೆ. ತಮಿಳುನಾಡಿಗೆ ಕೊಡಲು ನೀರಿಲ್ಲ. ಸೆ.27ರ ತನಕ ತಮಿಳುನಾಡಿಗೆ ಆರು ಸಾವಿರ ಕ್ಯುಸೆಕ್ ಕಾವೇರಿ ನೀರು ಬಿಡಬೇಕೆಂದು ನೀಡಿರುವ ಆದೇಶವನ್ನು ಬದಲಾಯಿಸುವಂತೆ ಕೋರಿ ಕರ್ನಾಟಕ ಸರಕಾರ ಇಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಮಂಗಳವಾರ ನಡೆಯಲಿದೆ.
ಕರ್ನಾಟಕ ತನ್ನ ಅರ್ಜಿಯನ್ನು ಸೋಮವಾರ ಸುಪ್ರೀಂ ಕೋರ್ಟ್ ರಿಜಿಸ್ಚ್ರಾರ್ ಅವರಿಗೆ ಸಲ್ಲಿಸಿದ್ದು, ಈ ಹಿಂದೆ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ದೀಪಕ್ ಮಿಶ್ರಾ ಕರ್ನಾಟಕ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಕರ್ನಾಟಕ ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸುತ್ತಿಲ್ಲ. ಹಿಂದೆ ನೀಡಲಾಗಿದ್ದ ಆದೇಶವನ್ನು ಬದಲಾಯಿಸಬಾರದು ಎಂದು ಇದೇ ವೇಳೆ ತಮಿಳುನಾಡು ಸುಪ್ರೀಂ ಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದೆ.