ಮರಳು ಸಮಸ್ಯೆ ನಿವಾರಿಸಲು ಒತ್ತಾಯಿಸಿ ಧರಣಿ
Update: 2016-09-26 15:04 IST
ಮಂಗಳೂರು, ಸೆ.26:ಜಿಲ್ಲೆಯಲ್ಲಿ ಉದ್ಭವಿಸಿರುವ ಮರಳು ಸಮಸ್ಯೆ ಯನ್ನು ನಿವಾರಣೆ ಮಾಡಲು ಆಗ್ರಹಿಸಿ ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘದ ನೇತೃತ್ವದ ಲ್ಲಿ ಇಂದು ಕಾರ್ಮಿಕರು ಜ್ಯೋತಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಜಾಥಾ ನಡೆಸಿ ಧರಣಿ ನಡೆಸಿದರು.
ದ.ಕ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನಾ ಸಭೆಯಲ್ಲಿ ಬಿಎಂಎಸ್ ರಾಜ್ಯಾಧ್ಯಕ್ಷ ವಿಶ್ವನಾಥ ಶೆಟ್ಟಿ, ಜಿಲ್ಲಾಧ್ಯಕ್ಷ ನಾರಾಯಣ ಶೆಟ್ಟಿ, ಪ್ರ.ಕಾರ್ಯದರ್ಶಿ ಗೋಪಾಲಕೃಷ್ಣ, ರಾಜ್ಯ ಉಪಾಧ್ಯಕ್ಷ ಪುರುಷೋತ್ತಮ, ಮುಖಂಡರಾದ ಮಾಧವ, ರವಿಶಂಕರ್, ಕಿಶೋರ್ ಕುಮಾರ್, ಚೇತನ್ ಕುಮಾರ್ ಉಪಸ್ಥಿತರಿದ್ದರು.