ಮರಳು ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭ

Update: 2016-09-26 10:12 GMT

ಉಡುಪಿ, ಸೆ.26: ಉಡುಪಿ ಜಿಲ್ಲಾ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘ(ಸಿಐಟಿಯು)ದ ನೇತೃತ್ವದಲ್ಲಿ ಮರಳು ಸಮಸ್ಯೆಯನ್ನು ಬಗೆಹರಿಸುವಂತೆ ಒತ್ತಾಯಿಸಿ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಮುಂದೆ ಕಾರ್ಮಿಕರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಇಂದು ಆರಂಭಗೊಂಡಿತು.

ಚೆನ್ನೈ ಹಸಿರುಪೀಠ ಮತ್ತು ರಾಜ್ಯ ಹೈಕೋರ್ಟ್‌ನಲ್ಲಿರುವ ತಡೆಯಾಜ್ಞೆಯನ್ನು ತೆರವುಗೊಳಿಸಲು ಸರಕಾರ ಯಾವುದೇ ಪ್ರಯತ್ನ ಮಾಡುತ್ತಿಲ್ಲ. ಮರಳು ಸಮಸ್ಯೆ ಬಗೆಹರಿಸುವವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಮಾತುಕತೆ ನಡೆಸುವವರೆಗೆ ಸತ್ಯಾಗ್ರಹವನ್ನು ಮುಂದುವರೆಸಲಾಗುವುದು ಎಂದು ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ್ ತಿಳಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಶೇಖರ್ ಬಂಗೇರ, ವಿಠಲ ಪೂಜಾರಿ, ದಾಸು ಭಂಡಾರಿ, ವಿಶ್ವನಾಥ ರೈ, ಉಮರ್ ಕಟಪಾಡಿ, ರಾಮಕರ್ಕಡ, ಕವಿರಾಜ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News