×
Ad

ಕಾರು ಪಲ್ಟಿ: ಬಿಜೆಪಿ ಜಿಲ್ಲಾಧ್ಯಕ್ಷ ಸಹಿತ ಐವರಿಗೆ ಗಾಯ

Update: 2016-09-26 18:32 IST

ಕಾಸರಗೋಡು, ಸೆ.26: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿ ಹೊಡೆದ ಪರಿಣಾಮ ಬಿಜೆಪಿ ಜಿಲ್ಲಾಧ್ಯಕ್ಷ ಸೇರಿದಂತೆ ಐದು ಮಂದಿ ಗಾಯಗೊಂಡ ಘಟನೆ ಉದುಮ ಚೇಟುಕುಂಡುವಿನಲ್ಲಿ ಸೋಮವಾರ ನಡೆದಿದೆ.

ಘಟನೆಯಿಂದಾಗಿ ಕಾಸರಗೋಡು ಜಿಲ್ಲಾ ಬಿಜೆಪಿ ಅಧ್ಯಕ್ಷ ಕೆ.ಶ್ರೀಕಾಂತ್ (48), ಕಾಸರಗೋಡು ಮಂಡಲ ಅಧ್ಯಕ್ಷ ಸುಧಾಮ ಗೋಸಾಡ (42), ಪದಾಧಿಕಾರಿಗಳಾದ ಪ್ರದೀಪ್ ಅಡೂರು (32), ದಿಲೀಪ್ ಕುಮಾರ್ (32), ಕಾರು ಚಾಲಕ ಕುಂಬಳೆಯ ಗುರುಪ್ರಸಾದ್ (38) ಗಾಯಗೊಂಡಿದ್ದಾರೆ.

ಕೋಝಿಕ್ಕೋಡ್‌ನಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಪಾಲ್ಗೊಂಡು ಮರಳುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಬೇಕಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News