×
Ad

ಮೂಡುಕೊಣಾಜೆ: ಕೊಲೆ ಪ್ರಕರಣದ ಆರೋಪಿಗಳು ಪೊಲೀಸ್ ಕಸ್ಟಡಿಗೆ

Update: 2016-09-26 21:01 IST

ಮೂಡುಬಿದಿರೆ, ಸೆ.26: ಶಿರ್ತಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಡುಕೊಣಾಜೆ ಕುಕ್ಕುದಕಟ್ಟೆಯಲ್ಲಿ ವಿವಾಹಿತನೋರ್ವನನ್ನು 12 ದಿನಗಳ ಹಿಂದೆ ಕೊಲೆ ಮಾಡಿ ಬಾವಿಗೆ ಎಸೆದ ಘಟನೆಗೆ ಸಂಬಂಧಿಸಿದ ಹಿನ್ನಲೆಯಲ್ಲಿ ನ್ಯಾಯಾಲಯವು ಆರೋಪಿಗಳಿಬ್ಬರನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.

ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಪೇರಾಮೊಗರು ಮನೆಯ ಕೃಷ್ಣಪ್ಪ ನಾಯ್ಕಾರ ಪುತ್ರ ಜಯರಾಜ್ ನಾಯ್ಕಾ (25)ರನ್ನು ಕೊಲೆಗೈಯಲಾಗಿತ್ತು. ಈ ಪ್ರಕರಣದ ಸಂಬಂಧಿಸಿದಂತೆ ಆರೋಪಿಗಳನ್ನು ಮೂಡುಬಿದಿರೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದರು. ನ್ಯಾಯಾಲಯವು ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ವಿಧಿಸಿತ್ತು.

ಆದರೆ ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ತಮ್ಮ ಕಸ್ಟಡಿಗೆ ನೀಡಬೇಕೆಂದು ಮೂಡುಬಿದಿರೆ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಸೋಮವಾರ ಪೊಲೀಸ್ ಕಸ್ಟಡಿಗೆ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News