×
Ad

18 ಸಾವಿರ ಕ್ಯೂಸೆಕ್ ನೀರು ಹರಿಸಲು ಸುಪ್ರೀಂ ಖಡಕ್ ಆದೇಶದ ಹಿನ್ನೆಲೆಯಲ್ಲಿ ನಾಳೆ ರಾಜ್ಯ ಸಚಿವ ಸಂಪುಟ ಸಭೆ

Update: 2016-09-27 17:35 IST

ಬೆಂಗಳೂರು, ಸೆ.27: ಮೂರು ದಿನಗಳ ಕಾಲ ತಮಿಳುನಾಡಿಗೆ ಹದಿನೆಂಟು ಸಾವಿರ ಕ್ಯೂಸೆಕ್  ನೀರು ಬಿಡುವಂತೆ ಸುಪ್ರೀಂ ಕೋರ್ಟ್‌ ಇಂದು ಖಡಕ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ಬುಧವಾರ ನಡೆಯಲಿದೆ.

ರಾಜ್ಯ ಸರಕಾರ ಸುಪ್ರೀಂ ಕೋರ್ಟ್‌‌ನಲ್ಲಿ ಸಲ್ಲಿರುವ ಆದೇಶ ಮಾರ್ಪಾಡು ಅರ್ಜಿಯ ವಿಚಾರಣೆ ನ್ಯಾಯಮೂರ್ತಿ ದೀಪಕ್ ಮಿಶ್ರಾ ಮತ್ತು ನ್ಯಾಯಮೂರ್ತಿ ಉದಯ್ ಲಲಿತ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್‌‌ನ ವಿಭಾಗೀಯ ಪೀಠ ಮಂಗಳವಾರ ನಡೆಸಿದ್ದು, ಆದರೆ ರಾಜ್ಯಕ್ಕೆ ಮತ್ತೆ ಹಿನ್ನಡೆ ಉಂಟಾಗಿದ್ದು,ಸೆ.28ರಿಂದ 30ರ ತನಕ ಹದಿನೆಂಟು ಸಾವಿರ ಕ್ಯೂಸೆಕ್‌ ನೀರು ಹರಿಸುವಂತೆ ರಾಜ್ಯ ಸರಕಾರಕ್ಕೆ ಆದೇಶ ನೀಡಿದೆ. 
ಕರ್ನಾಟಕ ಸರಕಾರದ ಮುಂದಿನ ನಿಲುವಿನ ಬಗ್ಗೆ  ಚರ್ಚಿಸಲು  ಸಂಪುಟ ಸಭೆ ಕರೆಯಲಾಗಿದೆ ಎಂದು ತಿಳಿದು ಬಂದಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News