ಬೆಂಗಳೂರಿನಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಹೆಚ್ಚಿನ ಆದ್ಯತೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮಾವತಿ
ಬೆಂಗಳೂರು, ಸೆ.28: ಬೆಂಗಳೂರು ನಗರದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಹೆಚ್ಚಿನ ಆದ್ಯತೆ ನೀಡುವುದಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಮೇಯರ್ ಸ್ಥಾನದ ಆಕಾಂಕ್ಷಿ ಕಾಂಗ್ರೆಸ್ ನ ಜಿ.ಪದ್ಮಾವತಿ ತಿಳಿಸಿದ್ದಾರೆ.
ಬಿಬಿಎಂಪಿ ಮೇಯರ್ ಮತ್ತು ಉಪ ಮೇಯರ್ ಆಯ್ಕೆಗೆ ನಡೆಯಲಿರುವ ಚುನಾವಣೆಗೆ ಕ್ಷಣಗಣನೆ ಆರಂಭಗೊಂಡಿದೆ. ಕಾಂಗ್ರೆಸ್ ಮೇಯರ್ ಸ್ಥಾನಕ್ಕೆ ಅಭ್ಯರ್ಥಿಯನ್ನಾಗಿ ಜಿ. ಪದ್ಮಾವತಿ ಅವರ ಹೆಸರನ್ನು ಅಂತಿಮಗೊಳಿಸಿದ್ದು, ಅವರು ಸ್ವಲ್ಪ ಹೊತ್ತಿನಲ್ಲಿ ನಾಮ ಪತ್ರ ಸಲ್ಲಿಸಲಿದ್ದಾರೆ.
ಕೆಂಪೇಗೌಡ ಪೌರ ಸಭಾಂಗಣದಲ್ಲಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ.ಕಾಂಗ್ರೆಸ್– ಜೆಡಿಎಸ್ ಮೈತ್ರಿ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದೆ.
ನಗರದ ವ್ಯಾಪ್ತಿಗೆ ಸೇರಿದ ಲೋಕಸಭೆ–ರಾಜ್ಯಸಭೆ ಸದಸ್ಯರು, ವಿಧಾನಸಭೆ–ವಿಧಾನ ಪರಿಷತ್ ಸದಸ್ಯರು ಮತದಾನದ ಹಕ್ಕು ಪಡೆದಿದ್ದಾರೆ. ಮೂವರು ಕೇಂದ್ರ ಮತ್ತು ಐವರು ರಾಜ್ಯದ ಸಚಿವರು ಪಾಲಿಕೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮೇಯರ್ ಆಯ್ಕೆಗೆ ಮತ ಚಲಾಯಿಸಲಿದ್ದಾರೆ.