ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ವಪಕ್ಷ ಸಭೆ ಆರಂಭ
ಬೆಂಗಳೂರು, ಸೆ.28: ಮೂರು ದಿನಗಳ ಕಾಲ ತಮಿಳುನಾಡಿಗೆ ಹದಿನೆಂಟು ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಖಡಕ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದ ನಿಲುವಿನ ಬಗ್ಗೆ ನಿರ್ಧಾರ ಕೈಗೊಳ್ಳಲು ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ವಪಕ್ಷ ಸಭೆ ಆರಂಭಗೊಂಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆಯುತ್ತಿದೆ. ಸಭೆಯಲ್ಲಿ ಕೇಂದ್ರ ಸಚಿವರಾದ ಅನಂತಕುಮಾರ್, ರಮೇಶ್ ಜಿಗಜಿಣಗಿ, ಡಿ.ವಿ.ಸದಾನಂದ ಗೌಡ, ಲೋಕಸಭೆಯ ಕಾಂಗ್ರೆಸ್ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಪ್ರತಿಪಕ್ಷ ನಾಯಕರಾದ ಜಗದೀಶ ಶೆಟ್ಟರ್, ಈಶ್ವರಪ್ಪ, ಬಸವರಾಜ ಹೊರಟ್ಟಿ, ಪುಟ್ಟಣ್ಣಯ್ಯ ಸೇರಿದಂತೆ ಸಚಿವರು, ಸಂಸದರು, ಶಾಸಕರು ಉಪಸ್ಥಿತರಿದ್ದಾರೆ.
ರಾಜ್ಯ ಸರಕಾರ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಆದೇಶ ಮಾರ್ಪಾಡು ಅರ್ಜಿಯ ವಿಚಾರಣೆ ನ್ಯಾಯಮೂರ್ತಿ ದೀಪಕ್ ಮಿಶ್ರಾ ಮತ್ತು ನ್ಯಾಯಮೂರ್ತಿ ಉದಯ್ ಲಲಿತ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್‌ನ ವಿಭಾಗೀಯ ಪೀಠ ನಡೆಸಿತ್ತು. ವಿಭಾಗೀಯ ಪೀಠ ನೀಡಿದ ಆದೇಶದ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಮತ್ತೆ ಹಿನ್ನಡೆಯಾಗಿದೆ. ಸೆ.28ರಂದ 30ರ ತನಕ ಹದಿನೆಂಟು ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ರಾಜ್ಯ ಸರಕಾರಕ್ಕೆ ಆದೇಶ ನೀಡಿತ್ತು..