ಕೋಟೆಕಾರ್‌ನಲ್ಲಿ ರಸ್ತೆ ಅಪಘಾತಕ್ಕೆ ಯುವಕ ಬಲಿ
Update: 2016-09-28 11:48 IST
ಉಳ್ಳಾಲ, ಸೆ.28: ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಉಳ್ಳಾ ಠಾಣಾ ವ್ಯಾಪ್ತಿಯ ಕೋಟೆಕಾರ್ ಬೀರಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.
ಮೃತರನ್ನು ಉಳ್ಳಾಲ ಪರಿಬೈಲ್ ನಿವಾಸಿ ಮುಹಮ್ಮದ್ ಅಫ್ತಾರ್(22) ಎಂದು ಗುರುತಿಸಲಾಗಿದೆ.
ಅಫ್ತಾರ್ ಅವರು ಮಾರೂರು ಕಡೆಯಿಂದ ಬೀರಿಗೆ ತನ್ನ ಸ್ಕೂಟಿಯಲ್ಲಿ ಸಂಚರಿಸುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಅವರಿದ್ದ ಆ್ಯಕ್ಟಿವಾ ಹೋಂಡಾಕ್ಕೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಅಫ್ತಾರ್ ಮೃತಪಟ್ಟಿದ್ದಾರೆ.
ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.