ಪ್ರವೀಣ್ ಪೂಜಾರಿ ಹತ್ಯೆ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಸ್ತರಣೆ

Update: 2016-09-28 16:28 GMT

ಉಡುಪಿ, ಸೆ.28: ಕೆಂಜೂರಿನ ಪ್ರವೀಣ್ ಪೂಜಾರಿ ಕೊಲೆ ಪ್ರಕರಣದ 21 ಮಂದಿ ಆರೋಪಿಗಳನ್ನು ಇಂದು ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಅವರ ನ್ಯಾಯಾಂಗ ಬಂಧನವನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಿ ನ್ಯಾಯಾಧೀಶರು ಆದೇಶ ನೀಡಿದರು.

ಸೆ.15ರಿಂದ ನ್ಯಾಯಾಂಗ ಬಂಧನದಲ್ಲಿದ್ದ ಈ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ 19 ಮತ್ತು ಪ್ರಚೋದನೆ ನೀಡಿದ ಇಬ್ಬರು ಆರೋಪಿಗಳ ಅವಧಿ ಇಂದಿಗೆ ಮುಗಿದ ಹಿನ್ನೆಲೆಯಲ್ಲಿ ಪೊಲೀಸರು ಉಡುಪಿಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯ ಮತ್ತು ಹೆಚ್ಚುವರಿ ಮುಖ್ಯ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.

ಈ ವೇಳೆ ನ್ಯಾಯಾಧೀಶ ರಾಜೇಶ್ ಕರ್ಣಂ ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು 14ದಿನಗಳ ಕಾಲ ವಿಸ್ತರಿಸಿ ಆದೇಶ ನೀಡಿದರು. ಬಳಿಕ ಇವರನ್ನು ಹಿರಿಯಡ್ಕ ಜೈಲಿಗೆ ಕರೆದೊಯ್ಯಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News