ಹಾಸ್ಟೆಲ್‌ಗಳಿಗೆ ತಾಪಂ ಅಧ್ಯಕ್ಷರಿಂದ ದಿಢೀರ್ ಭೆೇಟಿ
ಮೂಡಿಗೆರೆ, ಸೆ.28: ಸರಕಾರಿ ಹಾಸ್ಟೆಲ್‌ಗಳಲ್ಲಿ ವಾಸ್ತವ್ಯವಿರುವ ವಿದ್ಯಾರ್ಥಿಗಳಿಗೆ ಊಟ ಮತ್ತು ವಸತಿಯಲ್ಲಿ ಯಾವುದೇ ರೀತಿಯ ಕುಂದುಕೊರತೆ ಬಾರದಂತೆ ನೋಡಿಕೊಳ್ಳಬೇಕು ಎಂದು ತಾಪಂ ಅಧ್ಯಕ್ಷ ಕೆ.ಸಿ.ರತನ್ ತಿಳಿಸಿದರು.
ಅವರು ಮಂಗಳವಾರ ಗಂಗನಮಕ್ಕಿಯಲ್ಲಿರುವ ಹಿಂದುಳಿದ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ, ಅಲ್ಲಿನ ಊಟ ಮತ್ತು ವಸತಿಯನ್ನು ಪರಿಶೀಲಿಸಿ ಮಾತನಾಡಿದರು. ಗ್ರಾಮೀಣ ಭಾಗದಿಂದ ಬಡತನ ಮತ್ತು ಹಿಂದುಳಿದ ವರ್ಗದಿಂದ ಇಲ್ಲವೇ ವಸತಿ ವ್ಯವಸ್ಥೆಯ ಕೊರತೆಯಿಂದಾಗಿ ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿ ವಾಸ್ತವ್ಯ ಹೂಡಿರುತ್ತಾರೆ. ಇಂತಹ ಸೂಕ್ಷ್ಮಮನಸ್ಸಿನ ಮಕ್ಕಳಿಗೆ ಮನೆಯ ವಾತಾವರಣವನ್ನು ಕಲ್ಪಿಸಿಕೊಡಬೇಕಾಗಿದ್ದು, ಇಲ್ಲಿನ ಮೇಲ್ವಿಚಾರಕರ ಹೊಣೆಯಾಗಿದ್ದು, ಶುದ್ಧ ಮತ್ತು ರುಚಿಕರವಾದ ಆಹಾರವನ್ನು ಸಮಯಕ್ಕೆ ಸರಿಯಾಗಿ ನೀಡಬೇಕು. ತಾಲೂಕಿನ ಎಲ್ಲ ವಸತಿ ನಿಲಯಗಳಿಗೂ ಊಟದ ಸಮಯದಲ್ಲಿ ದಿಢೀರ್ ಭೇಟಿ ನೀಡಿ ಪರಿಶೀಲಿಸಲಾಗುವುದು. ಕೊರತೆಗಳು ಕಂಡು ಬಂದಲ್ಲಿ ಅಧಿಕಾರಿಗಳನ್ನು ಹೊಣೆಯಾಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಬಳಿಕ ಬೆಟ್ಟ್ಟಗೆರೆ ಸರಕಾರಿ ಬಾಲಕರ ವಸತಿ ನಿಲಯಕ್ಕೆ ಭೆೇಟಿ ನೀಡಿ ಆಹಾರ ಮತ್ತು ವಸತಿಯನ್ನು ಪರಿಶೀಲಿಸಿ ಸ್ವಚ್ಛತೆ ಕಾಪಾಡಿಕೊಳ್ಳಲು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ತಾಲೂಕು ಸಮಾಜ ಕಲ್ಯಾಣಾಧಿಕಾರಿ ಧನಂಜಯ, ಮೇಲ್ವಿಚಾರಕ ರಾಜೇಶ್, ಪ್ರಸನ್ನ ತಳವಾರ ಮತ್ತಿತರರು ಉಪಸ್ಥಿತರಿದ್ದರು.