ಟೆಸ್ಟ್ ತಂಡಕ್ಕೆ ಗಂಭೀರ್ ಸೇರ್ಪಡೆಯನ್ನು ಸಮರ್ಥಿಸಿಕೊಂಡ ಕುಂಬ್ಳೆ

Update: 2016-09-28 17:00 GMT

ಕೋಲ್ಕತಾ, ಸೆ.28: ದಿಲ್ಲಿಯ ಮಾಜಿ ಆರಂಭಿಕ ದಾಂಡಿಗ ಗೌತಮ್ ಗಂಭೀರ್ ಅವರನ್ನು ಟೆಸ್ಟ್ ತಂಡಕ್ಕೆ ಮರಳಿ ಸೇರ್ಪಡೆಗೊಳಿಸಿರುವುದನ್ನು ಟೀಮ್ ಇಂಡಿಯಾದ ಕೋಚ್ ಅನಿಲ್ ಕುಂಬ್ಳೆ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ.
ಕನ್ನಡಿಗ ಕೆ.ಎಲ್. ರಾಹುಲ್ ಅವರು ಗಾಯದ ಕಾರಣದಿಂದಾಗಿ ನ್ಯೂಝಿಲೆಂಡ್ ವಿರುದ್ಧದ ಸರಣಿಯಿಂದ ಹೊರಗುಳಿದಿರುವ ಹಿನ್ನೆಲೆಯಲ್ಲಿ ಗಂಭೀರ್ ಅವರಿಗೆ ಮರಳಿ ತಂಡ ಸೇರ್ಪಡೆಗೆ ಹಾದಿ ಸುಗಮವಾಗಿದೆ.
ಗೌತಮ್ ಗಂಭೀರ್ ದೇಶೀಯ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ಈ ಕಾರಣದಿಂದಾಗಿ ಅವರು ತಂಡಕ್ಕೆ ಮರಳಿದ್ದಾರೆ. ಹದಿನೈದು ಆಟಗಾರರ ತಂಡದಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಅಂತಿಮ ಹನ್ನೊಂದರ ತಂಡದಲ್ಲಿ ಅವಕಾಶ ನೀಡುವ ಬಗ್ಗೆ ಕೋಚ್ ಕುಂಬ್ಳೆ ಸುಳಿವು ನೀಡಿದ್ದಾರೆ.
ಗಂಭೀರ್ ಟೆಸ್ಟ್‌ನಲ್ಲಿ 40 ಸರಾಸರಿಯಂತೆ ರನ್ ದಾಖಲಿಸಿದ್ದಾರೆ.  2013ರಲ್ಲಿ ಇಂಗ್ಲೆಂಡ್ ವಿರುದ್ಧ ಕೊನೆಯ ಬಾರಿ ಟೆಸ್ಟ್ ಪಂದ್ಯ ಆಡಿದ್ದರು.
ಚೇತೇಶ್ವರ ಪೂಜಾರ ಒತ್ತಡ ಎದುರಿಸುತ್ತಿದ್ದಾರೆ ಎಂಬ ವದಂತಿಯನ್ನು ಕುಂಬ್ಳೆ ನಿರಾಕರಿಸಿದ್ದಾರೆ.
ಆಫ್ ಸ್ಪಿನ್ನರ್ ಜಯಂತ್ ಯಾದವ್ ಎರಡನೆ ಟೆಸ್ಟ್‌ಗೆ ತಂಡದಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಇಶಾಂತ್ ಶರ್ಮ ಚಿಕುನ್‌ಗುನ್ಯ ಕಾಯಿಲೆಯಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಅವರು ಎರಡನೆ ಟೆಸ್ಟ್‌ಗೆ ಇಲ್ಲ ಎಂದು ಕುಂಬ್ಳೆ ಹೇಳಿದ್ದಾರೆ.
ಗೌತಮ್ ಗಂಭೀರ್ ಮತ್ತು ಯುವರಾಜ್ ಸಿಂಗ್ ಅವರು ನ್ಯಾಶನಲ್ ಕ್ರಿಕೆಟ್ ಅಕಾಡಮಿಯಲ್ಲಿ ಫಿಟ್‌ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News