×
Ad

ಸಂಸದ ನಳಿನ್‌ಗೆ ಬಿಜೆಪಿ ಯುವ ಮೋರ್ಚಾ ಸನ್ಮಾನ

Update: 2016-09-28 23:52 IST

ಮಂಗಳೂರು, ಸೆ.28: ಬಿಜೆಪಿ ದ.ಕ. ಜಿಲ್ಲಾ ಯುವಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸಭೆಯು ಬುಧವಾರ ಜಿಲ್ಲಾ ಕಾರ್ಯಾಲಯದಲ್ಲಿ ನಡೆಯಿತು.
 ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್, ಭಾರತೀಯ ಜನತಾ ಪಾರ್ಟಿಯ ಮೋರ್ಚಾಗಳಲ್ಲಿ ಬಿಜೆಪಿ ಯುವಮೋರ್ಚಾವು ಬಲಿಷ್ಠವಾಗಿದ್ದು, ಪ್ರತಿ ಕಾರ್ಯಕರ್ತ ಪ್ರಧಾನಿ ನರೇಂದ್ರ ಮೋದಿ ಅವರ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು. 
 ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಹರೀಶ್ ಪೂಂಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಮಂಗಳೂರಿಗೆ ಸ್ಮಾರ್ಟ್‌ಸಿಟಿ ಮತ್ತು ಅಮೃತ್ ಯೋಜನೆಯನ್ನು ತರುವಲ್ಲಿ ನೇತೃತ್ವ ವಹಿಸಿದ ನಳಿನ್ ಕುಮಾರ್‌ರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜೀವ ಮಠಂದೂರು, ವಿಧಾನ ಪರಿಷತ್‌ನ ಪಕ್ಷದ ಮುಖ್ಯ ಸಚೇತಕ ಕ್ಯಾ.ಗಣೇಶ್ ಕಾರ್ಣಿಕ್, ವಿಭಾಗ ಸಹ ಸಂಘಟನಾ ಕಾರ್ಯದರ್ಶಿ ಯತೀಶ್ ಅರ್ವಾರ್, ಜಿಲ್ಲಾ ಬಿಜೆಪಿ ಪ್ರ.ಕಾರ್ಯದರ್ಶಿಗಳಾದ ಉಮಾನಾಥ ಕೋಟ್ಯಾನ್, ಸುದರ್ಶನ್ ಎಂ., ಕ್ಯಾ.ಬ್ರಿಜೇಶ್ ಚೌಟ, ಸಹ ಉಸ್ತುವಾರಿ ದರ್ಶನ್ ದೇಸಾಯಿ, ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷ ಶಿವರಂಜನ್, ದಕ್ಷಿಣ ಮಂಡಲದ ಅಧ್ಯಕ್ಷ ವೇದವ್ಯಾಸ್ ಕಾಮತ್, ಜಿತೇಂದ್ರ ಕೊಟ್ಟಾರಿ, ರಾಜ್ಯ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಪೃಥ್ವಿರಾಜ ಬಂಗೇರ, ಮಹೇಶ್, ಸಂದೇಶ್ ಶೆಟ್ಟಿ ಉಪಸ್ಥಿತರಿದ್ದರು. ಯುವ ಮೋರ್ಚಾ ಜಿಲ್ಲಾ ಪ್ರ.ಕಾರ್ಯದರ್ಶಿ ಹರೀಶ್ ಮೂಡುಶೆಡ್ಡೆ ಸ್ವಾಗತಿಸಿದರು.
ಜಿಲ್ಲಾ ಉಪಾಧ್ಯಕ್ಷ ಯುವ ಮೋರ್ಚಾ ಸಂದೀಪ್ ಶೆಟ್ಟಿ ಮರವೂರು ಮತ್ತು ಜಿಲ್ಲಾ ಕಾರ್ಯದರ್ಶಿ ದಯಾನಂದ ಕೊಣಾಜೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News