ಪಿ.ಎ. ಪಾಲಿಟೆಕ್ನಿಕ್‌ನಲ್ಲಿ ನಿಸ್ತಂತು ಸಂಪರ್ಕದ ಕುರಿತು ಉಪನ್ಯಾಸ
Update: 2016-09-29 15:57 IST
ಮಂಗಳೂರು, ಸೆ.28: ವಿದ್ಯಾರ್ಥಿಗಳು ದಸ್ತಾವೇಜನ್ನು ಮತ್ತು ದಾಖಲೆಗಳ ನಿರ್ವಹಣೆಯನ್ನು ತಮ್ಮ ದಿನನಿತ್ಯದ ಜೀವನದಲ್ಲಿ ರೂಢಿಸಿಕೊಳ್ಳಬೇಕು ಎಂದು ಸುಳ್ಯದ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಪ್ರೊ.ಸುರೇಶ ವಿ. ಹೇಳಿದರು. ಪಿ.ಎ. ಪಾಲಿಟೆಕ್ನಿಕ್‌ನ ವಿದ್ಯುನ್ಮಾನ ಮತ್ತು ಸಂವಹನ ವಿಭಾಗ ಆಯೋಜಿಸಿದ್ದ ಒಂದು ದಿನದ ಸೆಮಿನಾರ್ ಕಾರ್ಯಕ್ರಮದಲ್ಲಿ ‘ನಿಸ್ತಂತು ಸಂಪರ್ಕ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ.ಪಿ.ಸೂಫಿ ಮಾತನಾಡಿ, ವಿದ್ಯಾರ್ಥಿಗಳು ಪಠ್ಯಕ್ರಮದ ಜೊತೆಗೆ ಪ್ರಸ್ತುತ ತಂತ್ರಜ್ಞಾನದ ಮಾಹಿತಿಗಳನ್ನು ಸಂಗ್ರಹಿಸಬೇಕು ಎಂದು ಕಿವಿಮಾತು ಹೇಳಿದರು. ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಮುಖ್ಯಸ್ಥೆ ದಿವ್ಯಾ ಎ. ಸ್ವಾಗತಿಸಿದರು. ಉಪನ್ಯಾಸಕ ಮುಹಮ್ಮದ್ ಕಾರ್ಯಕ್ರಮ ನಿರೂಪಿಸಿದರು. ಜುವೈರಿಯಾ ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು. ತಾರಾದೇವಿ ವಂದಿಸಿದರು.